
ಬಂಟ್ವಾಳ: ದಕ್ಷಿಣ ಕನ್ನಡ ಕ್ಯಾಟರಿಂಗ್ ಮಾಲಕರ ಸಂಘ ಮಂಗಳೂರು ಇದರ ಬಂಟ್ವಾಳ ವಲಯದ ನೂತನ ಅಧ್ಯಕ್ಷರಾಗಿ ವಲೇರಿಯನ್ ಲೋಬೋ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಸದಾನಂದ ಬಿ. ಬಂಗೇರ, ಕೊಶಾಧಿಕಾರಿಯಾಗಿ ಸಿಲ್ವೆಸ್ಟರ್ ಲಸ್ರಾದೋ, ಸಂಘಟನಾ ಕಾರ್ಯದರ್ಶಿಯಾಗಿ ಆ್ಯಂಟನಿ ಸಿಕ್ವೇರಾ ಆಯ್ಕೆಯಾಗಿದ್ದಾರೆ.
ಸೆ.9 ರಂದು ಪದಗ್ರಹಣ:
ನೂತನ ಸಾಲಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸೆ.9 ರಂದು ಮಂಗಳವಾರ ಸಂಜೆ 6.30ಕ್ಕೆ ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಕ್ಯಾಟರಿಂಗ್ ಮಾಲಕರ ಸಂಘ ಬಂಟ್ವಾಳ ವಲಯದ ಅಧ್ಯಕ್ಷ ನಾರಾಯಣ ಸುವರ್ಣ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಉದ್ಯಮಿ ರೊ. ಸತೀಶ್ ಬೋಳಾರ್, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚ್ಚರ್ಡ್ ಡಿಕೋಸ್ತ, ದ.ಕ. ಕ್ಯಾಟರಿಂಗ್ ಮಾಲಕರ ಸಂಘದ ಅಧ್ಯಕ್ಷ ರಾಜೇಶ್ ಕೊಂಚಾಡಿ, ಹೊಟೇಲ್ ಉದ್ಯಮಿ ಸದಾನಂದ ಡಿ.ಶೆಟ್ಟಿ ಭಾಗವಹಿಸುವರು
Advertisement







