
ಬಂಟ್ವಾಳ:ವಿಶ್ವಕರ್ಮ ಸಮಾಜ ಸೇವಾ ಸಂಘ ಬಂಟ್ವಾಳ ಇದರ ಆಶ್ರಯದಲ್ಲಿ ಬಂಟ್ವಾಳದ ಅಜೆಕಲದಲ್ಲಿರುವ ವಿಶ್ವಕರ್ಮ ಸಭಾಭವನದಲ್ಲಿ 32 ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ನಡೆಯಿತು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಾತನಾಡಿ ಸಮುದಾಯದ ಸಾಧಕರನ್ನು ಗುರುತಿಸುವ ಕಾರ್ಯ ಅಭಿನಂದನೀಯ. ಸಮಾಜಮುಖಿ ಕಾರ್ಯದಲ್ಲಿ ವಿಶ್ವಕರ್ಮ ಸಂಘ ಸದಾ ತೊಡಗಿಸಿಕೊಳ್ಳಲಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.
ಮಾಜಿ ಸಚಿವ ಬಿ.ರಮನಾಥ ರೈ ಮುಖ್ಯ ಅತಿಥಿಯಾಗಿ ಮಾತನಾಡಿ ವಿಶ್ವಕರ್ಮ ಸಮಾಜ ಜಗತ್ತಿನ ಶ್ರೇಷ್ಠ ಸಮಾಜ . ಸಂಖ್ಯಾಬಲದಲ್ಲಿ ಕಡಿಮೆ ಇದ್ದರೂ ಕೂಡ ಕಾರ್ಯವೈಖರಿಯಲ್ಲಿ ಪ್ರಗತಿಪರ ದೃಷ್ಟಿಕೋನ ಇಟ್ಟುಕೊಂಡು ಹೆಚ್ಚಿನ ಕೆಲಸ ಮಾಡಿಕೊಂಡು ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಎಸ್ ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಅಪರೇಟಿವ್ ಸೊಸೈಟಿ ಲಿ. ನ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಮಾತನಾಡಿ ಸಮಾಜಕ್ಕಾಗಿ ಬದುಕಿದವರನ್ನು ಜಗತ್ತು ಎಂದೂ ಮರೆಯುವುದಿಲ್ಲ. ವೈ ಮನಸ್ಸನ್ನು ಮರೆತು ನಾವು ಒಗ್ಗೂಡಬೇಕು ಎಂದರು.
ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸಮಾಜಕ್ಕಾಗಿ ದುಡಿದಾಗ ನಮ್ಮ ಹೆಸರು ಚಿರಸ್ಥಾಯಿಯಾಗಿ ಉಳಿಯುತ್ತದೆ ಎಂದರು.


ಶೈಕ್ಷಣಿಕ ಸಾಧಕರನ್ನು, ಸಂಘದ ಸ್ಥಾಪಕರನ್ನು, ಗಣ್ಯ ಅತಿಥಿಗಳನ್ನು ಸನ್ಮಾನಿಸಲಾಯಿತು. ವಿಶ್ವಕರ್ಮ ಸಭಾಭವನ ಕಟ್ಟಡ ಸಮಿತಿ ಗೌರವಾಧ್ಯಕ್ಷ ಲೋಕೇಶ್ ಆಚಾರ್ಯ ಪುಂಜಾಲಕಟ್ಟೆ , ಕೋಶಾಧಿಕಾರಿ ವಿಶ್ವನಾಥ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಧಾರ್ಮಿಕ ಕಾರ್ಯದರ್ಶಿ ಯುವರಾಜ ಆಚಾರ್ಯ ಸ್ವಾಗತಿಸಿದರು, ವಿಶ್ವ ಜ್ಯೋತಿ ಮಹಿಳಾ ಸಂಘದ ಅಧ್ಯಕ್ಷೆ ವಿದ್ಯಾ ರತ್ನಾಕರ ಆಚಾರ್ಯ ಮಹಿಳಾ ಘಟಕದ ವರದಿ ವಾಚಿಸಿದರು. ಕಾರ್ಯದರ್ಶಿ ಉಮೇಶ್ ಆಚಾರ್ಯ ಸಂಘದ ವರದಿ ವಾಚಿಸಿದರು. ಗೌರವಾಧ್ಯಕ್ಷ ಮನೋಜ್ ಆಚಾರ್ಯ ನಾಣ್ಯ ವಂದಿಸಿದರು. ಮುರಳೀಧರ ಆಚಾರ್ಯ, ಪ್ರಕಾಶ್ ಆಚಾರ್ಯ, ಸುನಿಲ್ ಬಿ. ಕಾರ್ಯಕ್ರಮ ನಿರೂಪಿಸಿದರು.
ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವದ ಅಂಗವಾಗಿ ಬೆಳಿಗ್ಗೆ ರಮೇಶ್ ಪುರೋಹಿತ್ ಬಂಟ್ವಾಳ ಅವರ ಪೌರೋಹಿತ್ಯದಲ್ಲಿ ಸಂಕಲ್ಪ, ಕಲಶ ಪ್ರತಿಷ್ಠೆ, ಪೂಜಾ ವಿಧಿ, ಮಹಾಪೂಜೆ ನಡೆದು ಪ್ರಸಾದ ವಿತರಣೆ ನಡೆಯಿತು. ಬಳಿಕ ಸಂಘದ ಸದಸ್ಯರು ಹಾಗೂ ಮಹಿಳಾ ಸಮಿತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
Advertisement







