
ಬಂಟ್ವಾಳ: ಇಲ್ಲಿನ ಸಮಾಜ ಸೇವಾ ಸಹಕಾರಿ ಸಂಘದ 17ನೇ ಶಾಖೆಯು ಕಡಬ ತಾಲೂಕಿನ ಆಲಂಕಾರುವಿನಲ್ಲಿರುವ ಮಾತೃ ಕೃಪಾ ಕಟ್ಟಡದಲ್ಲಿ ಅ.5ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ಉದ್ಘಾಟನೆಗೊಳ್ಳಲಿದೆ.
ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಪ್ರಜ್ವಲಿಸಿ ಆಶೀರ್ವಚನ ನೀಡುವರು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ನೂತನ ಶಾಖೆಯನ್ನು ಉದ್ಘಾಟಿಸುವರು, ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ಅಧ್ಯಕ್ಷತೆ ವಹಿಸುವರು. ಭದ್ರತಾ ಕೊಠಡಿಯನ್ನು ಸಂಸದ ಕ್ಯಾ| ಬ್ರಿಜೇಶ್ ಚೌಟ ಉದ್ಘಾಟಿಸುವರು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೇಫ್ ಲಾಕರ್ ಉದ್ಘಾಟಿಸುವರು. ಕುಲಾಲ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಕಂಪ್ಯೂಟರ್ ಉದ್ಘಾಟಿಸುವರು.


ಸಹಕಾರ ಸಂಘಗಳ ಉಪನಿಬಂಧಕ ಎಚ್. ಎನ್. ರಮೇಶ್ ಠೇವಣಿ ಪತ್ರ ಬಿಡುಗಡೆ ಮಾಡುವರು. ಮುಖ್ಯ ಅತಿಥಿಗಳಾಗಿ ಬೆಂಗಳೂರು ಕುಲಾಲ ಸಂಘದ ಅಧ್ಯಕ್ಷ ದಿವಾಕರ ಮೂಲ್ಯ, ಆಲಂಕಾರು ಗ್ರಾ.ಪಂ. ಅಧ್ಯಕ್ಷೆ ಸುಶೀಲ, ಅಲಂಕಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಭಟ್ ಯು. ಲ್ಯಾಂಪ್ಸ್ ಸಹಕಾರ ಸಂಘದ ಮಾಜಿ ಅಧ್ಯಕ್ಷ ಪೂವಪ್ಪ ನಾಯ್ಕ ಎಸ್., ಪುತ್ತೂರು ವಕೀಲರ ಸಂಘದ ಕೋಶಾಧಿಕಾರಿ ಮಹೇಶ್ ಸವಣೂರು, ದ.ಕ. ಜಿಲ್ಲಾ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಪೀರ್ ಮೊಹಮ್ಮದ್ ಸಾಹೇಬ್, ಅಲಂಕಾರು ಗ್ರಾ.ಪಂ. ಉಪಾಧ್ಯಕ್ಷ ರವಿ ಪೂಜಾರಿ, ಪಿಡಿಓ ಸುಜಾತ, ವೈದ್ಯೆ ಡಾ| ಕೃತಿ ಶೆಟ್ಟಿ, ಕಟ್ಟಡ ಮಾಲೀಕ ಕುಶಾಲಪ್ಪ ಗೌಡ ಸಹಿತ ಅನೇಕ ಗಣ್ಯರು ಭಾಗವಹಿಸುವರು ಎಂದು ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ಬೈಪಾಸಿನ ಪ್ರಧಾನ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಮಾರ್ಚ್ 2025ರ ಅಂತ್ಯಕ್ಕೆ ಸಂಘದಲ್ಲಿ ಒಟ್ಟು 9047 ಎ ತರಗತಿ ಸದಸ್ಯರಿದ್ದು ಪಾಲು ಬಂಡವಾಳ ರೂ. 8.04ಕೋಟಿ, ಠೇವಣಾತಿಗಳು ರೂ. 229.47 ಕೋಟಿ, ನಿಧಿಗಳು ರೂ.19.78ಕೋಟಿ, ವಿನಿಯೋಗಗಳು 55.55 ಕೋಟಿ, ಸಾಲಗಳು ರೂ. 215.21ಕೋಟಿ, ಇದ್ದು ವಸೂಲಾತಿ ಶೇಕಡ 95.04 ಆಗಿರುತ್ತದೆ. 2024-25 ನೇ ಸಾಲಿನಲ್ಲಿ ರೂ. 1159.91 ಕೋಟಿ ವ್ಯವಹಾರ ನಡೆಸಿ ರೂ. 5.04 ಕೋಟಿ ಲಾಭ ಗಳಿಸಿರುತ್ತದೆ. ಸಂಘದ ದುಡಿಯುವ ಬಂಡವಾಳ ರೂ. 259.66 ಕೋಟಿ ಮೀರಿದ್ದು ಅಡಿಟ್ ವರ್ಗೀಕರಣದಲ್ಲಿ ‘ಎ’ ತರಗತಿ ಆಗಿರುತ್ತದೆ. ಆಗಸ್ಟ್ 2025 ಕ್ಕೆ ಸಹಕಾರಿಯಲ್ಲಿ ಒಟ್ಟು 9140 ‘ಎ’ ತರಗತಿ ಸದಸ್ಯರಿದ್ದು ಪಾಲು ಬಂಡವಾಳ ರೂ. 8.05ಕೋಟಿ, ಠೇವಣಾತಿಗಳು ರೂ. 245.70ಕೋಟಿ, ಸಾಲಗಳು ರೂ. 229.33ಕೋಟಿ, ಸಂಘದ ದುಡಿಯುವ ಬಂಡವಾಳ ರೂ. 275.80 ಕೋಟಿ ಆಗಿದೆ ಎಂದು ಮಾಹಿತಿ ನೀಡಿದರು. ಸಂಘ 18ನೇ ಶಾಖೆಯು 2026ರ ಜನವರಿ 14ರಂದು ಬೋಳಿಯಾರಿನಲ್ಲಿ ಉದ್ಘಾಟನೆಗೊಳ್ಳಲಿದೆ, ಮುಂದಿನ ದಿನಗಳಲ್ಲಿ ಇನ್ನು ನಾಲ್ಕು ಶಾಖೆಗಳನ್ನು ಆರಂಭಿಸಲು ಆಡಳಿತ ಮಂಡಳಿ ತಿರ್ಮಾನಿಸಿದೆ. ಸಹಕಾರಿಯಲ್ಲಿ 69 ಖಾಯಂ ಸಿಬ್ಬಂದಿಗಳು ಹಾಗೂ ಇತರ ಠೇವಣಾತಿ ಸಂಗ್ರಾಹಕರಾಗಿ 44 ಮಂದಿ ಕಾರ್ಯನಿರ್ವಹಿಸುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಜನರಿಗೆ ಉದ್ಯೋಗ ನೀಡುವ ಚಿಂತನೆ ಆಡಳಿತ ಮಂಡಳಿಯದ್ದಾಗಿದೆ. ಗ್ರಾಹಕರ ಸೇವೆಯ ಅನುಕೂಲಕ್ಕಾಗಿ ತ್ವರಿತ ಸಾಲ ಸೌಲಭ್ಯ ಜಾರಿಗೊಳಿಸಲಾಗಿದೆ, ಗ್ರಾಹಕರ ಅನುಕೂಲಕ್ಕಾಗಿ ಆನ್ಲೈನ್ ಮುಖಾಂತರ ಸೇವೆಯನ್ನು ಕೊಡುವ ಯೋಜನೆ ಜಾರಿಗೊಂಡಿದೆ. 2024-25ನೇ ಸಾಲಿನಲ್ಲಿ ಉನ್ನತ ವ್ಯಾಸಂಗಕ್ಕಾಗಿ ಸದಸ್ಯರ ಮಕ್ಕಳಿಗೆ ರೂ. 6.88 ಲಕ್ಷ ವಿದ್ಯಾರ್ಥಿ ವೇತನ ನೀಡಿದೆ. ಸಂಘದ ಸದಸ್ಯರ ವೈದ್ಯಕೀಯ ಚಿಕಿತ್ಸೆಗೆ ರೂ. 5.84 ಲಕ್ಷ ನೀಡಿದೆ. ರೂ. 10 ಸಾವಿರ ಮೇಲ್ಪಟ್ಟ ನಿರಖು ಠೇವಣಾತಿದಾರರಿಗೆ ರೂ. ಒಂದು ಲಕ್ಷ ಮೊತ್ತದ ಅಪಘಾತ ವಿಮೆಯ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರಸ್ತುತ ಸದಸ್ಯರಿಗೆ ಸರಕಾರದ ಯಶಸ್ವಿನಿ ಆರೋಗ್ಯ ರಕ್ಷಣಾ ಸೌಲಭ್ಯ ಯೋಜನೆ ಮತ್ತು ಮಣಿಪಾಲ ಆರೋಗ್ಯ ಕಾರ್ಡ್ ಸೌಲಭ್ಯವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಉಪಾಧ್ಯಕ್ಷ ಜನಾರ್ದನ ಬೊಂಡಾಲ, ನಿರ್ದೇಶಕರಾದ ರಮೇಶ್ ಸಾಲ್ಯಾನ್, ಸುರೇಶ್ ಕುಲಾಲ್ ಎನ್., ರಮೇಶ್ ಸಾಲ್ಯಾನ್ ಬಿ., ಭೋಜ ಸಾಲ್ಯಾನ್, ಕಿರಣ್ ಕುಮಾರ್ ಎ., ಜಗನ್ನಿವಾಸ ಗೌಡ, ಗಣೇಶ್ ಸಮಗಾರ, ರೇಖಾ ನಾಯಕ್, ಪ್ರಧಾನ ವ್ಯವಸ್ಥಾಪಕ ಭೋಜ ಮೂಲ್ಯ ಉಪಸ್ಥಿತರಿದ್ದರು.
—
Advertisement







