
ಬಂಟ್ವಾಳ: ಸಾಧನೆ ಮಾಡುವ ಮನಸಿದ್ದರೆ ಪ್ರಕೃತಿಯೇ ನಮಗೆ ಬೆಂಬಲವಾಗಿ ನಿಲ್ಲುತ್ತದೆ. ಸಮಸ್ಯೆಯನ್ನು ಮೀರಿ ನಿಲ್ಲುತ್ತೇವೆ ಎನ್ನವ ಛಲ ಇದ್ದಾಗ ಸಾಧನೆ ಮಾಡಲು ಸಾಧ್ಯ
ಎಂದು ಸಹಕಾರ ಸಂಘಗಳ ಜಂಟಿ ನಿಬಂಧಕಿ ಯಶಸ್ವಿನಿ ಶೆಟ್ಟಿ
ಹೇಳಿದರು.


ಬಂಟರ ಸಂಘ ಬಂಟ್ವಾಳ ತಾಲೂಕು ಇದರ ವತಿಯಂದ ಅಲ್ ಕಾರ್ಗೋ ಲಾಜಿಸ್ಟಿಕ್ ಮುಂಬೈ ಇದರ ಅಧ್ಯಕ್ಷ ಡಾ. ಶಶಿಕಿರಣ್ ಶೆಟ್ಟಿ ಇವರ ಸಹಕಾರದೊಂದಿಗೆ ರಾಮಲ್ ಕಟ್ಟೆಯ ಬಂಟವಾಳ ಬಂಟರ ಭವನದಲ್ಲಿ ನಡೆದ ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಮಾಹಿತಿ ಕೊರತೆಯಿಂದಾಗಿ ನಾಗರಿಕ ಸೇವೆಯತ್ತ ಯುವ ಸಮುದಾಯ ಬರುತ್ತಿಲ್ಲ. ಇಚ್ಚಾಶಕ್ತಿ, ಅವಿರತ ಶ್ರಮ ಇದ್ಸಾಗ ಇಂತಹ ಸರಕಾರಿ ಸೇವೆಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಬಂಟರ ಸಂಘದ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಗಾರ ಹಮ್ಮಿಕೊಳ್ಳುವಂತೆ ಸಲಹೆ ನೀಡಿದರು.


ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಉಪ ಕುಲಪತಿ
ವಿಶಾಲ್ ಹೆಗ್ಡೆ ಮಾತನಾಡಿ ನಿರಂತರ ಪ್ರಯತ್ನ ಇಲ್ಲದೆ ಯಾವುದೇ ಸಾಧನೆ ಮಾಡಲು ಸಾಧ್ಯವಿಲ್ಲ. ವಿದ್ಯಾರ್ಥಿ ವೇತನ ನೀಡಿದವರನ್ನು ನೆನೆಪಿಟ್ಟುಕೊಂಡು ಮುಂದಿನ ದಿನಗಳಲ್ಲಿ ಆರ್ಥಿಕವಾಗಿ ಸಬಲರಾದಾಗ ಮತ್ತೆ ವಿದ್ಯಾರ್ಥಿಗಳಿಗೆ ನೀಡಲು ನೆರವಾಗುವಂತೆ ತಿಳಿಸಿದರು.
ಅಲ್ ಕಾರ್ಗೋ ಲಾಜಿಸ್ಟಿಕ್ಸ್ ನ ಸಿಎಸ್ ಆರ್ ನ ಪ್ರಧಾನ ವ್ಯವಸ್ಥಾಪಕ ಡಾ. ನೀಲ್ ರತನ್ ಶೆಂಡೆ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸರಿಯಾದ ಮಾರ್ಗದರ್ಶನ ಸಿಕ್ಕಾಗ ಸಾಧನೆಯ ಪಥದಲ್ಲಿ ಸಾಗಲು ಸಾಧ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಎ.ಜೆ. ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಶಾಂತರಾಮ ರೈ, ದೈಹಿಕ ಶಿಕ್ಷಣ ಶಿಕ್ಷಕ ಜಗದೀಶ್ ರೈ, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿ ಆಯ್ಕೆಯಾದ ಸುಶ್ಮಿತಾ ಶೆಟ್ಟಿ ಬದಿಗುಡ್ಡೆ, ನೌಕದಳ ಲೆಫ್ಟಿನೆಂಟ್ ವಿಭಾ ಶೆಟ್ಟಿ ಫರಂಗಿಪೇಟೆ ಅವರನ್ನು ಅಭಿನಂದಿಸಲಾಯಿತು. ಏರ್ಯ ಲಕ್ಷ್ಮೀ ನಾರಾಯಣ ಆಳ್ಚ ದತ್ತಿ ನಿಧಿಯನ್ನು ಲಹರಿ ರೈ ಅವರಿಗೆ ನೀಡಲಾಯಿತು. ಒಟ್ಟು 60 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿದರು
ಉಪಾಧ್ಯಕ್ಷ ಐತಪ್ಪ ಆಳ್ವ ಸುಜೀರುಗುತ್ತು, ಕೋಶಾಧಿಕಾರಿ ಲೋಕೇಶ್ ಶೆಟ್ಟಿ ಕುಳ, ಜತೆ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ
ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣ ಸಮಿತಿ ಸಂಚಾಲಕ ಉಮನಾಥ ರೈ ಮೇರಾವು, ಜತೆ ಕೋಶಾಧಿಕಾರಿ
ಶ್ರೀವಿದ್ಯಾ ಎ. ರೈ, ಮಹಿಳಾ ವಿಭಾಗದ ಅಧ್ಯಕ್ಷೆ
ಸುಜಾತ ಪಿ. ರೈ ,ಯುವ ವಿಭಾಗದ ಅಧ್ಯಕ್ಷ ಗೋಕುಲ್ ಭಂಡಾರಿ ಬಿಜಂದಾರ್ ಗುತ್ತು, ಉಪಸ್ಥಿತರಿದ್ದರು
ಸಂಘದ ಅಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಪ್ರಾಸ್ತಾವಿಕ ಮಾತಾನಾಡಿದರು.ರೋಟರಿ ಸದಸ್ಯ ವಿಶ್ವಂಭರ ರೈ ಸ್ವಾಗತಿಸಿದರು.
ವಿವೇಕ್ ಶೆಟ್ಟಿ ಬದಿಗುಡ್ಡೆ ಅತಿಥಿಗಳನ್ನು ಪರಿಚಯಿಸಿದರು. ಪ್ರಧಾನ ಕಾರ್ಯದರ್ಶಿ ಕಂಪ ಸದಾನಂದ ಆಳ್ವ ವಂದಿಸಿದರು. ಬಾಲಕೃಷ್ಣ ಅಳ್ವ ಕಾರ್ಯಕ್ರಮ ನಿರೂಪಿಸಿದರು.
Advertisement







