
ಬಂಟ್ವಾಳ: ಸಮಾನ ಮನಸ್ಕರು ಸೇರಿ ಸಮಾಜದ ಅಶಕ್ತರಿಗೆ ನೆರವಾಗುವ ದೃಷ್ಟಿಯನ್ನು ಇಟ್ಟುಕೊಂಡು ಕರುನಾಡು ಚಾರಿಟೇಬಲ್ ಟ್ರಸ್ಟ್ ಕರ್ನಾಟಕ ಎಂಬ ಸಂಸ್ಥೆಯನ್ನು ಸ್ಥಾಪಿಸಿದ್ದು ಕಾರಿಂಜದ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಟ್ರಸ್ಟ್ ನ ಉದ್ಘಾಟನೆ ಮತ್ತು ಲಾಂಛನವನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷ ಬಿ. ಅರ್ಜುನ್ ಭಂಡಾರ್ಕರ್ ಉಪಸ್ಥಿಯಲ್ಲಿ ಉದ್ಘಾಟಿಸಲಾಯಿತು.


ಈ ಸಂದರ್ಭದಲ್ಲಿ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ (ರಿ.)ಮಡವು ಇದರ ಅಧ್ಯಕ್ಷ ತ ಸಚಿನ್ ಸುವರ್ಣ, ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೀರೇಂದ್ರ ಅಮೀನ್, , ಕಾವಳಮೂಡುರು ಗ್ರಾಮ ಪಂಚಾಯತ್ ಅಧ್ಯಕ್ಷ ಅಜಿತ್ ಶೆಟ್ಟಿ ಕಾರಿಂಜ ಹಾಗೂ ಟ್ರಸ್ಟ್ ನ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಕಾರಿಂಜೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Advertisement







