
ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮಂಗಳೂರು ಇದರ ಆಶ್ರಯದಲ್ಲಿ ಸಂತ ಜೋಸೆಫರ ಪದವಿ ಪೂರ್ವ ಕಾಲೇಜು ಬಜ್ಪೆ ಇದರ ಸಹಕಾರದೊಂದಿಗೆ ಸೋಮವಾರ ನಡೆದ ಪದವಿ ಪೂರ್ವ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಕಲ್ಲಡ್ಕ ಶ್ರೀ ರಾಮ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯೂಸಿ ವಿದ್ಯಾರ್ಥಿ ಬೆನಝೀರ್ ಲಿಂಗ್ ದೋದ್ ಬಾಕ್ಸಿಂಗ್ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಗೆದ್ದುಕೊಂಡಿದ್ದಾನೆ.


ಈತ ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ಮಾರ್ಷಲ್ ಆರ್ಟ್ ತರಬೇತಿ ಪಡೆಯುತ್ತಿದ್ದಾನೆ. ರಾಜೇಶ್ ಬ್ರಹ್ಮರಕೂಟ್ಲು ಅವರು ನೆತ್ತರಕೆರೆ ಸರಕಾರಿ ಶಾಲೆಯಲ್ಲಿ ಕರಾಟೆ, ಜೂಡೋ, ಕಲರಿ, ಸಿಲಂಬಂ, ಬಾಕ್ಸಿಂಗ್, ಸ್ಕೇಟಿಂಗ್ ಮೊದಲಾದ ಮಾರ್ಷಲ್ ಆರ್ಟ್ ತರಬೇತಿಯನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದ್ದಾರೆ. ಬೆನಝೀರ್ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಜೂಡೋ ಸ್ಪರ್ಧೆಯಲ್ಲೂ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾನೆ
Advertisement







