
ಪುತ್ತೂರು. ಇಲ್ಲಿನ ಭಾರತ್ ಸಿನೆಮಾಸ್ ನಲ್ಲಿ ಬುಧವಾರ ಮಧ್ಯಾಹ್ನ ರೂಪೇಶ್ ಶೆಟ್ಟಿ ನಿರ್ದೇಶಿಸಿ ನಾಯಕ ನಟನಾಗಿ ಅಭಿನಯಿಸಿರುವ ತುಳು ಚಿತ್ರ ‘ಜೈ’ ಯ ವಿಶೇಷ ಪ್ರದರ್ಶನ ನಡೆಯಿತು.
ಮಂಗಳೂರಿನ ಎಂ.ಜಿ. ಮೋಟರ್ಸ್ ಪ್ರಾಯೋಜಕತ್ವದಲ್ಲಿ ಬಂಟ್ವಾಳ, ವಿಟ್ಲ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ಹಾಗೂ ಮಡಿಕೇರಿ ಸೇರಿದಂತೆ ವಿವಿಧ ಪ್ರದೇಶಗಳಿಂದ ಆಗಮಿಸಿದ್ದ ಮಾಧ್ಯಮ ಮತ್ತು ಪತ್ರಿಕಾ ಪ್ರತಿನಿಧಿಗಳು ಹಾಗೂ ಅವರ ಕುಟುಂಬ ವರ್ಗದವರಿಗಾಗಿ ಈ ವಿಶೇಷ ಪ್ರದರ್ಶನ ಆಯೋಜಿಸಲಾಗಿತ್ತು.

ಪತ್ರಕರ್ತರ ಸೇವೆಯನ್ನು ಗೌರವಿಸುವ ಉದ್ದೇಶದಿಂದ, ಮಾಧ್ಯಮ ಪ್ರತಿನಿಧಿಗಳು ಹಾಗೂ ಅವರ ಕುಟುಂಬ ಸದಸ್ಯರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ಚಿತ್ರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಅಜಯ್ ಪುರುಷೋತ್ತಮ್ ಶೆಟ್ಟಿ ಹಾಗೂ ‘ಜೈ’ ಚಿತ್ರದ ನಾಯಕ ನಟ ರೂಪೇಶ್ ಶೆಟ್ಟಿ ಉಪಸ್ಥಿತರಿದ್ದರು. ಸಿನಿಮಾ ತಂಡ ಹಾಗೂ ಪ್ರಾಯೋಜಕರು ಪತ್ರಿಕಾ ವಲಯದ ಬೆಂಬಲಕ್ಕೆ ಕೃತಜ್ಞತೆ ವ್ಯಕ್ತಪಡಿಸಿದರು.


Advertisement







