
ಬಂಟ್ವಾಳ: ಸಮುದಾಯದ ಆರೋಗ್ಯಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಮಾಡಿದೆ. ನಮ್ಮ ಆಹಾರ ಪದ್ದತಿ, ಜೀವನ ಶೈಲಿಯಿಂದಾಗಿ ಕಾನ್ಸರ್ನಂತಹ ಮಾರಕ ರೋಗಳು ಬಾಧಿಸುತ್ತವೆ, ದುಶ್ಚಟಗಳಿಂದ ಆರೋಗ್ಯ ಸಮಸ್ಯೆ ಕಾಣುತ್ತವೆ. ಉತ್ತಮವಾದ ಜೀವನ ಶೈಲಿಯನ್ನು ರೂಢಿಸಿಕೊಂಡಾಗ ಆರೋಗ್ಯದಿಂದ ಇರಲು ಸಾಧ್ಯವಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ದ.ಕ. ಜಿಲ್ಲಾ ನಿರ್ದೇಶಕ ದಿನೇಶ್ ಡಿ. ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಇದರ ವಗ್ಗ ವಲಯದ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು, ಜ| ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇದರ ಸಹಯೋಗದೊಂದಿಗೆ ವಾಮದಪದವು ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಜಯರಾಮ್ ಅಧ್ಯಕ್ಷತೆ ವಹಿಸಿ ಮಾತನಾಡಿ ನಾವು ಎಲ್ಲವನ್ನೂ ಪ್ರಕೃತಿಯಿಂದ ಪಡೆದುಕೊಳ್ಳುತ್ತೇವೆ, ಆತ್ಮಶಕ್ತಿ ಮತ್ತು ಚೈತನ್ಯ ದೇವರ ಸ್ವರೂಪವಾಗಿರುತ್ತದೆ. ನಮ್ಮ ಆಹಾರ ವಿಹಾರ ಉತ್ತಮವಾಗಿದ್ದಾಗ ಆರೋಗ್ಯವೂ ಉತ್ತಮವಾಗಿರುತ್ತದೆ. ವೈದ್ಯರ ಮಾರ್ಗದರ್ಶನ ಪಡೆದುಕೊಂಡು ಆರೋಗ್ಯದ ಕಾಳಜಿ ವಹಿಸಬೇಕು ಎಂದು ತಿಳಿಸಿದರು.

ಜ| ಕೆ.ಎಸ್, ಹೆಗ್ಡೆ ಆಸ್ಪತ್ರೆಯ ವೈದ್ಯ ಡಾ. ವಿನಯ್ ಜೆ. ರಾಜೇಂದ್ರ ಕ್ಯಾನ್ಸರ್ ರೋಗದ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಅಧ್ಯಕ್ಷೆ ವನಿತಾ, ಜನಜಾಗೃತಿ ವೇದಿಕೆ ವಗ್ಗ ವಲಯದ ಸದಸ್ಯರಾದ ನವೀನ್ ಚಂದ್ರ ಶೆಟ್ಟಿ, ಹರೀಂದ್ರ ಪೈ,
ನೀಲಿ ನೀಲಕಂಠೇಶ್ವರ ದೇವಸ್ಥಾನದ ಅಧ್ಯಕ್ಷ ಗೋಪಾಲಕೃಷ್ಣ ಚೌಟ, ಗ್ರಾಮಾಭಿವೃದ್ಧಿ ಯೋಜನೆಯ ಕೊಡಂಬೆಟ್ಟು ಒಕ್ಕೂಟದ ಅಧ್ಯಕ್ಷೆ ಅನಿತಾ ಪ್ರಭು, ಶೌರ್ಯ ಮಾಸ್ಟರ್ ಪ್ರಕಾಶ್, ಜನಜಾಗೃತಿ ಸದಸ್ಯ ಪ್ರವೀಣ್ ಉಪಸ್ಥಿತರಿದ್ದರು.

ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸವಿತಾ ಸ್ವಾಗತಿಸಿದರು, ಉಪನ್ಯಾಸಕ ಡಾ. ವಿಶಾಲ್ ಪಿಂಟೋ ವಂದಿಸಿದರು, ಆರೋಗ್ಯ ಸಹಾಯಕಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿಗಳು ಸಹಕರಿಸಿದರು. ಬಳಿಕ ಆರೋಗ್ಯ ತಪಾಸಣೆ ನಡೆಯಿತು. ತಜ್ಞ ವೈದ್ಯರು ಆರೋಗ್ಯ ತಪಾಸಣೆ ನಡೆಸಿದರು.
Advertisement







