
ಬಂಟ್ವಾಳ: ಇಲ್ಲಿನ ಕಾಂಜಿರಕೋಡಿ ಜ್ಞಾನ ದೀಪ ಜ್ಞಾವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಭಾನುವಾರ ನಡೆಯಿತು.
ಸರಕಾರಿ ಶಾಲೆಯ ನಿವೃತ್ತ ಶಿಕ್ಷಕಿ ಪ್ರೆಸಿಲ್ಲಾ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಕಾರ್ಯಕ್ರಮದಲ್ಲಿ ವಲಯಾಧ್ಯಕ್ಷ ಮನೋಹರ್ ನೇರಂಬೋಳು, ವಲಯದ ಮೇಲ್ವಿಚಾರಕ ರಾಜೇಶ್ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು. ಬಳಿಕ ಕೇಂದ್ರದ ಸದಸ್ಯರಿಂದ, ಪಾರ್ದಾನ, ಕುಣಿತ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


Advertisement







