
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಇದರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಸರಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಟ್ಯೂಷನ್ ತರಗತಿ ಆರಂಭಿಸಲಾಯಿತು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕ ಭಾಸ್ಕರ್ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಪ್ರಾಸ್ತವಿಕವಾಗಿ ಮಾತನಾಡಿದರು. ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಪುರುಷೋತ್ತಮ್ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ವಿನೋಲ ಸಿಲಿಯ ಪಿಂಟೋ,. ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಧನಂಜಯ ಶೆಟ್ಟಿ, ಗಿರಿಧರ್ ನಾಯಕ್, ಒಕ್ಕೂಟ ಅಧ್ಯಕ್ಷ ಗಿರೀಶ್, ಶಿಕ್ಷಕರಾದ ಆದಮ್. ಜಾನವಿಕಾಸ ಸಮನ್ವಯಧಿಕಾರಿ ಸವಿತಾ, ಸೇವಾಪ್ರತಿನಿಧಿ ಮೋಹಿನಿ, ಶುಭ, ಟ್ಯೂಷನ್ ಶಿಕ್ಷಕಿ ಅಶ್ವಿತ ಹಾಗೂ ಶಾಲೆಯ ಶಿಕ್ಷಕರು, ಒಕ್ಕೂಟ ಸದಸ್ಯರು, ಮತ್ತು ಮಕ್ಕಳು ಉಪಸ್ಥಿತರಿದ್ದರು.


Advertisement







