
ಬಂಟ್ವಾಳ: ಇಲ್ಲಿನ ಸರಕಾರಿ ಪಾಲಿಟೆಕ್ನಿಕ್ನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಜೀಪಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಡಿ.18ರಿಂದ ಡಿ.24ರವರೆಗೆ ನಡೆಯಲಿದ್ದು ಗುರುವಾರ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಜಿಪಿಟಿ ಪ್ರಾಂಶುಪಾಲ ನರಸಿಂಹ ಭಟ್ ಎಚ್. ಅಧ್ಯಕ್ಷತೆ ವಹಿಸಿದ್ದರು. ಸಜಿಪ ಮೂಡ ಗ್ರಾಮ ಪಂಚಾಯತಿ ಅಧ್ಯಕ್ಷೆ ಶೋಭಾ ಶೆಟ್ಟಿ ಶಿಬಿರ ಉದ್ಘಾಟಿಸಿ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳನ್ನು ಸಮಾಜದಲ್ಲಿ ಉತ್ತಮ ಸ್ಥಾನಕ್ಕೆ ತಲುಪಿಸುವ ದಿಶೆಯಲ್ಲಿ ನಿರಂತರವಾಗಿ ಶ್ರಮಿಸುತ್ತಿದೆ, ಇಂತಹ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸ ಸಾಧ್ಯವಾಗುತ್ತದೆ ಹಾಗೂ ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಿ ರೂಪುಗೊಳ್ಳಲು ನೆರವಾಗುತ್ತದೆ ಎಂದರು.



ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಸದಸ್ಯ ವಿಶ್ವನಾಥ ಬೆಲ್ಚಡ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಯ ಪ್ರಕಾಶ್ ಪೆರ್ವ, ಪದವಿಪೂರ್ವ ವಿಭಾಗದ ಪ್ರಾಂಶುಪಾಲೆ ಡಾ. ಜೈರಾಬಿ, ಪ್ರೌಢಶಾಲೆಯ ಉಪಾಪ್ರಾಂಶುಪಾಲೆ ಜ್ಯೋತಿ ಕುಮಾರಿ, ಜಿಪಿಟಿ ಯಾಂತ್ರಿಕ ವಿಭಾಗದ ವಿಭಾಗಾಧಿಕಾರಿ ಭಾಗವನ್ ಪ್ರಸಾದ್, ಕಾಮಗಾರಿ ವಿಭಾಗದ ವಿಭಾಗಾಧಿಕಾರಿ ಮೋಹನ್ ರಾಜ್ ಜಿ.ಎಸ್., ಕಂಪ್ಯೂಟರ್ ಸೈನ್ಸ್ ವಿಭಾಗದ ವಿಭಾಗಾಧಿಕಾರಿ ಭುವನೇಶ್ವರಿ, ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ವಿಭಾಗಾಧಿಕಾರಿ ಪ್ರವೀಣ್ ವಿ.ಡಿ. ಹಾಗೂ
ಎನ್.ಎಸ್.ಎಸ್ ಘಟಕದ ನಾಯಕ ಸಿಂಚನ್ ಉಪಸ್ಥಿತರಿದ್ದರು.
ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಭಾಸ್ಕರ್ ಎಲ್. ಪ್ರಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು ಜಯಂತ್ ವಂದಿಸಿ, ದೀಕ್ಷಿತ್ ಕಾರ್ಯಕ್ರಮ ನಿರೂಪಿಸಿದರು.
Advertisement







