
ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ಸಾಯಿ ಕಿಡ್ ಝೋನ್ ವಿದ್ಯಾಸಂಸ್ಥೆಯಲ್ಲಿ 12ನೇ ವರ್ಷದ ವಾರ್ಷಿಕೋತ್ಸವ ಕಿಡ್ ಝೋನ್ ವೈಭವ 2026 ಶಾಲಾ ವಠಾರ ದಲ್ಲಿ ನಡೆಯಿತು.
ಸಭಾ ವೇದಿಕೆಯಲ್ಲಿ ಮುಖ್ಯ ಅತಿಥಿ ಯಾಗಿ ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಬಸ್ತಿ ಮಾಧವ ಶೆಣೈ, ಕಾರ್ಯದರ್ಶಿ ಮಹಮ್ಮದ್ ಯಾಸೀರ್, ಶಾಲೆಯ ಹಿರಿಯ ವಿದ್ಯಾರ್ಥಿ ಸ್ಪಂದನ ಎಸ್ ಪೂಜಾರಿ, ನಾರಾಯಣ ಹೆಗ್ಡೆ ಬಿ ಸಿ ರೋಡ್, ಬೂಡ ಅಧ್ಯಕ್ಷ ಬೇಬಿ ಕುಂದರ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ತೇಜಸ್ವಿನಿ ಪೂಜಾರಿ, ಆಡಳಿತ ಮಂಡಳಿ ಸದಸ್ಯ ರಾಜೇಶ್ ಅಮೀನ್ ಉಪಸ್ಥಿತರಿದ್ದರು.
ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನಡೆಸಿದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆಯ ಶಿಕ್ಷಕರು ಮತ್ತು ಸಿಬ್ಬಂದಿಗಳನ್ನು ಗೌರವಿಸಲಾಯಿತು. ಶಾಲಾ ಸಂಚಾಲಕ ಐತಪ್ಪ ಪೂಜಾರಿ ಸಭೆಯ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಶಾಲಾ ಶಿಕ್ಷಕಿ ಪೂರ್ಣಿಮಾ ವರದಿ ವಾಚಿಸಿದರು. ಆಡಳಿತ ಮಂಡಳಿಯ ಸದಸ್ಯೆ ಆರತಿ ಅಮೀನ್ ವಂದಿಸಿ, ಆಡಳಿತ ಮಂಡಳಿ ಸದಸ್ಯ ಅಶ್ರಿತ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕಿಯರಾದ ಚೈತ್ರ, ಪುಷ್ಪಲತಾ, ರಂಜಿನಿ , ಗೀತಾ , ದಿವ್ಯ ಸಹಕರಿಸಿದರು.


Advertisement







