
ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ ಬಂಟ್ವಾಳ ಶಾಖೆಯ 2023-24 ಮತ್ತು 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರಿಗೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಭಾನುವಾರ ಬಿ.ಸಿ.ರೋಡಿನಲ್ಲಿರುವ ಸರಕಾರಿ ನೌಕರರ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮ ವನ್ನು ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಸಚಿನ್ ಕುಮಾರ್ ಉದ್ಘಾಟಿಸಿದರು. ಅವರು ಮಾತನಾಡಿ ಇಂದು ಸರಕಾರಿ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆಯಿಂದಾಗಿ 4 ಮಂದಿಯ ಕರ್ತವ್ಯವನ್ನು ಒಬ್ಬನೇ ನಿರ್ವಹಿಸಬೇಕಾದ ಅನಿವಾರ್ಯತೆಯಿಂದ ಸರಕಾರಿ ನೌಕರರು ಮಾನಸಿಕ ಹಾಗೂ ದೈಹಿಕ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ ಎಂದು ತಿಳಿಸಿದರು.
ಗಣ್ಯ ಅತಿಥಿಯಾಗಿ ಉಪಸ್ಥಿತರಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ ಸರಕಾರಿ ನೌಕರರ ಸಂಘದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅವರ ಬೇಡಿಕೆಗಳಿಗೆ ಸ್ಪಂದಿಸಿದ್ದೇನೆ ಎಂದರು.

ಮುಖ್ಯ ಅತಿಥಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಮಾತನಾಡಿ ಸಂಘಟನಾ ಶಕ್ತಿ ಇಲ್ಲದೇ ಜಯಗಳಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ರಾಜ್ಯಕ್ಕೆ ಮಾದರಿಯಾಗುವಂತಹ ಸಂಘಟನೆಗೆ ಉಮನಾಥ ರೈಯವರು ಮೇಲ್ಪಂಕ್ತಿಯನ್ನು ಹಾಕಿದ್ದು ಅದೇ ದಾರಿಯಲ್ಲಿ ಸಂಘಟನೆಯನ್ನು ಮುನ್ನಡೆಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಅತ್ಯಧಿಕ ಅಂಕ ಪಡೆದ ಸರಕಾರಿ ನೌಕರರ ಮಕ್ಕಳು ಹಾಗೂ ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಸರಕಾರಿ ನೌಕರರ ಮಕ್ಕಳನ್ನು ಅಭಿನಂದಿಸಲಾಯಿತು. ಪ್ರಶಸ್ತಿ ಪುರಸ್ಕೃತ ಸರಕಾರಿ ನೌಕರರು, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸರಕಾರಿ ನೌಕರರನ್ನು ಅಭಿನಂದಿಸಲಾಯಿತು. ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಸರಕಾರಿ ನೌಕರರನ್ನು ಗೌರವಿಸಲಾಯಿತು. ನಿಕಟಪೂರ್ವ ಅಧ್ಯಕ್ಷ ಉಮಾನಾಥ ರೈ ಮೇರಾವು ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಪಿಂಚಣಿದಾರರ ಸಂಘದ ಅಧ್ಯಕ್ಷ ಪಿ.ಲೋಕನಾಥ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು.
ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಶಿಕಲಾ, ಸಂಘದ ಗೌರವಾಧ್ಯಕ್ಷ ಶಮಂತ್ ಕುಮಾರ್, ಹಿರಿಯ ಉಪಾಧ್ಯಕ್ಷ ನಂದನ್ ಶೆಣೈ, ಉಪಾಧ್ಯಕ್ಷ ಸೀತಾರಾಮ ಪೂಜಾರಿ, ನಿವೃತ್ತ ಉಪನ್ಯಾಸಕರಾದ ಅಂಬಾಪ್ರಸಾದ್, ವೇದಿಕೆಯಲ್ಲಿ ದ್ದರು. ಸಂಘದ ಕಾರ್ಯದರ್ಶಿ ಸಂತೋಷ್ ಕುಮಾರ್ ಸ್ವಾಗತಿಸಿದರು, ಖಜಾಂಚಿ ಬಸಯ್ಯ ಅಲಿಮಟ್ಟಿ ವಂದಿಸಿದರು. ಶಿಕ್ಷಕರಾದ ಜಯರಾಂ, ನಿರೂಪಿಸಿದರು. ಜನಾರ್ಧನ್, ನವೀನ್ ಪಿ.ಎಸ್. ಸಹಕರಿಸಿದರು.
Advertisement







