
ಬಂಟ್ವಾಳ: ದಕ್ಷಿಣ-ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಪ್ರಸಾದ್ ಗಾಣಿಗ ಅವರನ್ನು ನೇಮಕಾತಿಗೊಳಿಸಿ ಕನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಂಜುನಾಥ್ ಎಚ್.ಎಸ್. ಆದೇಶಿಸಿದ್ದಾರೆ.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವ ಹಿನ್ನಲೆಯಲ್ಲಿ ಹಾಗೂ ಸಂಘಟನೆಯನ್ನು ರಾಜ್ಯದಾದ್ಯಂತ ಸಕ್ರಿಯಗೊಳಿಸಲು ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ರವರ ನಿರ್ದೇಶನದ ಮೇರೆಗೆ ಹಾಗೂ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ನಿಗಮ್ ಭಂಡಾರಿ ಯವರ ಅನುಮೋದನೆಯೊಂದಿಗೆ ಪ್ರಸಾದ ಗಾಣಿಗ ಅವರನ್ನು ನೇಮಕ ಮಾಡಲಾಗಿದೆ. ಕಳೆದ ಹಲವು ಸಮಯಗಳಿಂದ ಯುವ ಕಾಂಗ್ರೆಸ್ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು ಸ್ಥಳೀಯ ಸಾಮಾಜಿಕ ಸಂಘಟನೆಗಳಲ್ಲೂ ಮುಂಚೂಣಿಯಲ್ಲಿದ್ದಾರೆ.


Advertisement







