
ಬಂಟ್ವಾಳ: ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಫೆ.15ರಂದು ನಡೆಯಲಿದೆ. ಬೆಳಿಗ್ಗೆ 6.30ಕ್ಕೆ ಅರ್ಚಕ ರಘುರಾಮ್ ಮಯ್ಯ ದೀಪ ಪ್ರಜ್ವಲಿಸುವರು, ಬಳಿಕ ವಿವಿಧ ಭಜನಾ ತಂಡಗಳಿಂದ ಭಜನೋತ್ಸವ ಕಾರ್ಯಕ್ರಮ ನಡೆಯಲಿದೆ. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಘು ಎಲ್. ಶೆಟ್ಟಿ ದೇವಸ್ಯ, ಸೀತಾರಾಮ ಪೂಂಜ, ಕುಶಕುಮಾರ್ ಉಪಸ್ಥಿತರಿರುವರು.
ಬೆಳಿಗ್ಗೆ 9 ಗಂಟೆಗೆ ಏಕಾದಶ ರುದ್ರಾಭಿಷೇಕ, ವಿಶೇಷ ರುದ್ರಹೋಮ, ರಾತ್ರಿ 7ಕ್ಕೆ ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ರಾತ್ರಿ 7.30ಕ್ಕೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕೃಪಾಪೋಷಿತ ಯಕ್ಷಗಾನ ಮಂಡಳಿ ಪಾವಂಜೆ ಇವರಿಂದ ಶ್ರೀ ತುಲಸಿ ಕಾಲಮಿತಿ ಯಕ್ಷಗಾನ ಬಯಲಾಟ ನಡೆಯಲಿದೆ


Advertisement







