
ಬಂಟ್ವಾಳ: ದ.ಕ. ಜಿಲ್ಲಾ ಕೆಂದ್ರ ಸಹಕಾರಿ ಬ್ಯಾಂಕ್ ನಿ., ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಳ ಬಿ.ಸಿ.ರೋಡು, ಸಹಕಾರ ಇಲಾಖೆ ದ.ಕ. ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ದ.ಕ. ಜಿಲ್ಲೆಯ ಪತ್ತಿನ, ಮೂರ್ತೆದಾರರ ಮತ್ತು ಇತರ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾಮಟ್ಟದ ತರಬೇತಿ ಕಾರ್ಯಕ್ರಮ ಬಿ.ಸಿ.ರೋಡಿನ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು.
ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಳ ನಿ. ದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಕಾನೂನುಗಳು ಬದಲಾಗುತ್ತಿದ್ದಂಯೇ ಸಹಕಾರಿ ಕ್ಷೇತ್ರದಲ್ಲಿ ಅನೇಕ ಸವಾಲುಗಳು ಸಿಬ್ಬಂದಿಗಳಿಗೆ ಎದುರಾಗುತ್ತಿರುತ್ತದೆ. ಈ ನಿಟ್ಟಿನಲ್ಲಿ ಕಾನೂನು ಅರಿವು ಮೂಡಿಸುವುದರ ಜೊತೆಗೆ ಗ್ರಾಹಕರೊಂದಿಗೆ ಉತ್ತಮ ವ್ಯವಹಾರ ಮಾಡಲು ಇಂತಹ ತರಬೇತಿ ಸಹಕಾರಿಯಾಗಲಿದೆ. ಸಹಕಾರಿ ಯೂನಿಯನ್ ನಿರ್ದೇಶಕನಾದ ಬಳಿಕ ಸಹಕಾರಿ ಸಂಘದ ಸಿಬ್ಬಂದಿಗಳಿಗೆ ಜಿಲ್ಲಾ ಮಟ್ಟದ ತರಬೇತಿ ಹಮ್ಮಿಕೊಳ್ಳಬೇಕೆಂಬ ಬೇಡಿಕೆಗೆ ಸಹಕಾರಿ ಯೂನಿಯನ್ ಅವಕಾಶ ಮಾಡಿಕೊಟ್ಟಿರುವುದಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಿ ಮಾತನಾಡಿ
ಸಹಕಾರಿ ಕ್ಷೇತ್ರ ಪವಿತ್ರವಾದ ಕ್ಷೇತ್ರ. ಜನಸಾಮಾನ್ಯರಿಗೆ ಉತ್ತಮವಾದ ಸೇವೆ ನೀಡುವ ಕಾರ್ಯವನ್ನು ಇಲ್ಲಿನ ಸಹಕಾರಿ ಸಂಘಗಳು ಮಾಡುತ್ತಿವೆ.
ಗ್ರಾಹಕರು ಬ್ಯಾಂಕ್ ಗೆ ಬಂದಾಗ ಭದ್ರತೆಯ ಆಧಾರದಲ್ಲಿ ಸಾಲ ನೀಡ ಬೇಕಾಗುತ್ತದೆ. ಮನವೊಲಿಸಿಯಾದರೂ ಮರುಪಾವತಿ ಮಾಡಬೇಕಾಗಿರುವುದು ಸಿಬ್ಬಂದಿಗಳ ಕರ್ತವ್ಯ. ಆ ನಿಟ್ಟಿನಲ್ಲಿ ತರಬೇತಿಯಲ್ಲಿ ಪಡೆದ ಮಾಹಿತಿಯನ್ನು ಇತರ ಸಿಬ್ಬಂದಿಗಳಿಗೂ ಹಂಚಿಕೊಂಡು ತಮ್ಮ ಸಂಸ್ಥೆಯ ಬೆಳೆಯಲು ಸಹಕರಿಸಬೇಕೆಂದು ತಿಳಿಸಿದರು.
ಸಹಕಾರ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ ರಾವ್ ಮಾತನಾಡಿ ಜಿಲ್ಲಾಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳುವುದರ ಮೂಲಕ ಸಿಬ್ಬಂಮದಿಗಳಿಗೆ ಇತರ ಸಂಘದ ಸಿಬ್ಬಂದಿಗಳೊಂದಿಗೆ ಸಂಪರ್ಕ ಹಾಗೂ ಬ್ಯಾಂಕಿಂಗ್ ಕ್ಷೇತ್ರದ ಅರಿವು ಮೂಡಲು ಇದು ಸಹಾಯಕವಾಗಿದೆ ಎಂದರು.
ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ಮಾತನಾಡಿ ಒಬ್ಬರನ್ನೊಬ್ಬರು ಅರಿತು ಮುನ್ನಡೆದಾಗ ಸಹಕಾರಿ ಸಂಘಗಳು ಅಭಿವೃದ್ಧಿಯಾಗಲು ಸಾಧ್ಯವಿದೆ ಎಂದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕಿ ಸವಿತಾ ಎನ್. ಶೆಟ್ಟಿ, ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರ ಮಹಾ ಮಂಡಳದ ಉಪಾಧ್ಯಕ್ಷ ರಾಜೇಶ್ ಸುವರ್ಣ, ನಿರ್ದೇಶಕರಾದ ಆರ್. ಸಿ. ನಾರಾಯಣ್, ಬಿ.ವಿಶ್ವನಾಥ, ಅಣ್ಣಿ ಯಾನೆ ನೋಣಯ್ಯ ಪೂಜಾರಿ , ಗಣೇಶ್ ಪೂಜಾರಿ , ಶಿವಪ್ಪ ಸುವರ್ಣ
ವಿಶ್ವನಾಥ ಪೂಜಾರಿ ಪಂಜ, ಪುರುಷ ಎನ್. ಸಾಲಿಯಾನ್
ಉಪಸ್ಥಿತರಿದ್ದರು.


ವಿಶ್ವಕರ್ಮ ಸಹಕಾರಿ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ
ವಸಂತ ಅಡ್ಯಂತ್ತಾಯ, ಆಟೋಮೇಷನ್ ಕ್ಲೌಡ್ ಸೊಲ್ಯುಷನ್ ನ ವ್ಯವಸ್ಥಾಪಕ ನಿರ್ದೇಶಕ ಜಗದೀಶ್ ರಾಮ್
ಸಹಕಾರಿ ಸಂಘಗಳ ಉಪನಿಬಂಧಕರ ಕಚೇರಿ ಅಧೀಕ್ಷಕ ಎನ್. ಜೆ. ಗೋಪಾಲ್ ತರಬೇತಿ ನೀಡಿದರು.
ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ನ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎಸ್.ವಿ. ಹಿರೇಮಠ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ದ.ಕ. ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕಿಶೋರ್ ಕುಮಾರ್ ವಂದಿಸಿದರು.
Advertisement







