
ಬಂಟ್ವಾಳ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ ವತಿಯಿಂದ 18ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ ಹಾಗೂ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಾ.8 ರಂದು ರವಿವಾರ ಪುಂಜಾಲಕಟ್ಟೆಯ ಬಂಗ್ಲೆ ಮೈದಾನದಲ್ಲಿ ನಡೆಯಲಿದೆ.
ಬೆಳಿಗ್ಗೆ 9ಕ್ಕೆ ವಧು-ವರರ ಭವ್ಯ ಮೆರವಣಿಗೆ ನಡೆಯಲಿದೆ. 18ನೇ ವರ್ಷದ ಮದುವೆ ದಿಬ್ಬಣಕ್ಕೆ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ನಿವೃತ್ತ ಬ್ಯಾಂಕ್ ಮ್ಯಾನೇಜರ್ ಚಂದ್ರಹಾಸ ಶೆಟ್ಟಿ ಮಜಲೋಡಿ, ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಷನ್ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ ಮತ್ತಿತರ ಗಣ್ಯರು ಚಾಲನೆ ನೀಡುವರು.
ರಾಜ್ಯ ಧಾರ್ಮಿಕ ಪರಿಷತ್ ವಿಶೇಷ ಆಹ್ವಾನಿತ ಸದಸ್ಯ ರವಿಶಂಕರ್ ಸಮಾರಂಭ ಉದ್ಘಾಟಿಸುವರು, ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸುವರು, ಸಂಸದ ಬ್ರಿಜೇಶ್ ಚೌಟ ರಾಜ್ಯ ಪ್ರಶಸ್ತಿ ಪ್ರದಾನ ಮಾಡುವರು, ಉದ್ಯಮಿ ಅಬ್ದುಲ್ ಕುಂಞ ಹಾಗೂ ಪಿಲಾತಬೆಟ್ಟು ವ್ಯವಸಾಯ ಸೇವಾಸ ಹಕಾರಿ ಬ್ಯಾಂಕಿನ ಮಾಜಿ ಅಧ್ಯಕ್ಷ ಯು.ಎಸ್. ಚಂದ್ರಶೇಖರ್ ಭಟ್ ಮಂಗಲ ಸೂತ್ರ ವಿತರಿಸುವರು, ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು, ಜಗದೀಪ್ ಡಿ.ಸುವರ್ಣ, ಅಶೋಕ್ ನೆಕ್ರಾಜೆ, ನಿತ್ಯಾನಂದ ಪೂಜಾರಿ ಕೆಂತಲೆ ಮತ್ತಿತರ ಗಣ್ಯರು ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಧಾರ್ಮಿಕ ಕ್ಷೇತ್ರದಲ್ಲಿ ರವಿಶಂಕರ ಶೆಟ್ಟಿ ಬಡಾಜೆಗುತ್ತು, ಯಕ್ಷಗಾನ ಕ್ಷೇತ್ರದಲ್ಲಿ ದಿವಾಕರ ದಾಸ್, ಶಿಕ್ಷಣ ಕ್ಷೇತ್ರದಲ್ಲಿ ಸಂತೋಷ್ ಎಸ್. ಸನಿಲ್, ಉದ್ಯಮ ಕ್ಷೇತ್ರದಲ್ಲಿ ಮೊಹಮ್ಮದ್ ರಫೀಕ್, ಸಮಾಜ ಸೇವೆ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸುಧೀರ್ ಪೂಜಾರಿಯವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸುವುದಾಗಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ನ ಸ್ಥಾಪಕಾಧ್ಯಕ್ಷ ಎಂ. ತುಂಗಪ್ಪ ಬಂಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement







