
ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ಸಾಯಿ ಕಿಡ್ ಝೋನ್ ವಿದ್ಯಾಸಂಸ್ಥೆಯಲ್ಲಿ ರೋಟರಿ ಕ್ಲಬ್ ಬಂಟ್ವಾಳ ಹಾಗೂ ಶಾಲೆಯ ರಕ್ಷಕ ಶಿಕ್ಷಕ ಸಂಘದ ಸಹಯೋಗದೊಂದಿಗೆ ಆರ್ಟ್ ಮತ್ತು ಕ್ರಾಫ್ಟ್ ಪ್ರದರ್ಶನ ಮತ್ತು ಕಿಡ್ ಝೋನ್ ಪುಡ್ ಫೆಸ್ಟಿವಲ್ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಯಮಿ ಲೋಕೇಶ್ ಸುವರ್ಣ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ನ ವಲಯ ಸೇನಾನಿ ಪ್ರಕಾಶ್ ಬಾಳಿಗ, ನಿವೃತ್ತ ಚಿತ್ರಕಲಾ ಶಿಕ್ಷಕ ಚೆನ್ನಕೇಶವ ಡಿ.ಆರ್. , ರೋಟರಿ ಕ್ಲಬ್ ಬಂಟ್ವಾಳ ದ ಕಾರ್ಯದರ್ಶಿ ಮಹಮ್ಮದ್ ಯಾಸೀರ್, ಪ್ರಮುಖರಾದ
ಜಯಪ್ರಕಾಶ್ ಜೆ.ಎಸ್., ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ತೇಜಸ್ವಿನಿ ಪೂಜಾರಿ, ಶಾಲಾ ಆಡಳಿತ ಮಂಡಳಿ ಸದಸ್ಯೆ ಆರತಿ ಅಮೀನ್, ಭಾಗವಹಿಸಿ ಶುಭಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕ ಐತಪ್ಪ ಪೂಜಾರಿ ವಹಿಸಿಕೊಂಡು ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.
ಶಿಕ್ಷಕಿ ಪೂರ್ಣಿಮಾ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿ ಚೈತ್ರ ವಂದಿಸಿದರು. ಶಿಕ್ಷಕಿಯರಾದ ಪುಷ್ಪಲತಾ, ರಂಜಿನಿ, ಗೀತಾ ಹಾಗೂ ದಿವ್ಯ ಸಹಕರಿಸಿದರು.


Advertisement







