
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘದಿಂದ ಜನರಲ್ಲಿ ಸ್ವಾಭಿಮಾನದ ಬದುಕಿನ ಜೊತೆಗೆ ಆರ್ಥಿಕ ಶಕ್ತಿ ಹಾಗೂ ಧೈರ್ಯ ಬಂದಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ದ.ಕ. ಜಿಲ್ಲಾ ನಿರ್ಧೇಶಕ ದಿನೇಶ್ ಡಿ. ಹೇಳಿದರು.

ಕುರಿಯಾಳ ಶಾಲೆಯಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಇದರ ಬಿ.ಸಿ.ರೋಡು ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘದ ಕುರಿಯಾಳ ಒಕ್ಕೂಟದ ಪದಗ್ರಹಣ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರಿಸಿ ಮಾತನಾಡಿದರು.

ಶುಭ ಸಮೂಹ ಸಂಸ್ಥೆಯ ಚಂದ್ರಾವತಿ ಸೇಸಪ್ಪ ಕೋಟ್ಯಾನ್ ದೀಪ ಪ್ರಜ್ವಲಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ರೋನಾಲ್ಡ್ ಡಿಸೋಜಾ ಮಾತನಾಡಿ ಜನರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರಯೋಜನವನ್ನು ಪಡೆದು ಇನ್ನಿತರರಿಗೆ ಪ್ರೇರಣೆ ನೀಡುವ ಕಾರ್ಯ ಆಗಬೇಕು ಎಂದು ತಿಳಿಸಿದರು. ನೂತನ ಅಧ್ಯಕ್ಷ ನವಿನ್ ಪೂಜಾರಿ ಅನಿಸಿಕೆ ವ್ಯಕ್ತಪಡಿಸಿ ಎಲ್ಲರ ಸಹಕಾರ ಕೋರಿದರು.
ಅಮ್ಟಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷೆ ಮಲ್ಲಿಕಾ ವಿ.ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ
ಸಣ್ಣ ಸಣ್ಣ ಉಳಿತಾಯ ಮುಂದೊಂದು ದಿನ ದೊಡ್ಡ ಮೊತ್ತವಾಗಿ ನಮಗೆ ನೆರವಾಗಲಿದೆ. ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಸಾಲ ಪಡೆಯಲು ಸಾಕಷ್ಟು ಹರ ಸಾಹಸ ಪಡಬೇಕು ,ಆದರೆ ಯೋಜನೆಯ ಸ್ವಸ ಹಾಯ ಸಂಘದ ಮೂಲಕ ಸುಲಭ ವಿಧಾನದಲ್ಲಿ ಸಾಲ ಪಡೆಯಲು ಸಾಧ್ಯವಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಸದಸ್ಯರನ್ನು, ನೂತನ ಸದಸ್ಯರನ್ನು ಅಭಿನಂದಿಸಲಾಯಿತು. ಒಕ್ಕೂಟದ ಮಾಜಿ ಅಧ್ಯಕ್ಷರನ್ನು, ನೂತನ ಪದಾಧಿಕಾರಿಗಳನ್ನು, ಯೋಜನೆಯ ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿಯನ್ನು ಗೌರವಿಸಲಾಯಿತು.


ಉತ್ತಮ ಸಂಘಗಳಿಗೆ ಬ್ಯಾಗ್ ವಿತರಿಸಲಾಯಿತು. ಅದೃಷ್ಠಚೀಟಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಅಮ್ಟಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಹರೀಶ್ ಶೆಟ್ಟಿ ಪಡು,
ಉದ್ಯಮಿ ರತ್ನಾಕರ ಪೂಜಾರಿ ಬಳ್ಳಿ ಹೊಸಮಣ್ಣು, ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ.,
ನಿಕಟಪೂರ್ವ ಅಧ್ಯಕ್ಷೆ ಧನಲಕ್ಷ್ಮೀ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯೋಜನೆಯ ಮೇಲ್ವಿಚಾರಕ ಗಿರೀಶ್ ಸ್ವಾಗತಿಸಿದರು.
ಸೇವಾಪ್ರತಿನಿಧಿ ಕವಿತಾ ವರದಿ ವಾಚಿಸಿದರು, ಜತೆ ಕಾರ್ಯದರ್ಶಿ ಯತೀಶ್ ಕುಕ್ಕಾಜೆ ವಂದಿಸಿದರು.
ಸತೀಶ್ ಪೂಜಾರಿ ಪಡು ಕಾರ್ಯಕ್ರಮ ನಿರೂಪಿಸಿದರು.
Advertisement







