
ಬಂಟ್ವಾಳ: ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ವಿದ್ಯಾರ್ಥಿನಿ ವೀಕ್ಷಾ ವಿ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ತಿಪಟೂರಿನ ಕಲ್ಪತರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ಸ್ಪರ್ಧೆಯಲ್ಲಿ ಅವರು 21 ಕಿಮೀ ಹಾಫ್ ಮ್ಯಾರಥಾನ್ನಲ್ಲಿ ಬೆಳ್ಳಿ ಪದಕ ಮತ್ತು 10 ಕಿ.ಮೀ ಓಟದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.
ವೀಕ್ಷಾ ಅವರು ಮಂಜುಳಾ ಮತ್ತು ಬಂಟ್ವಾಳ ನಗರ ಠಾಣೆಯ ಎಎಸೈ ವಿಜಯಗೌಡ ಅವರ ಪುತ್ರಿ.




.
Advertisement







