
ಬಂಟ್ವಾಳ: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವಲಯದ ವತಿಯಿಂದ ಕೈಕಂಬದಲ್ಲಿರುವ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾರತ ಸರಕಾರ ದ ನಿಕ್ಷಯ್ ಮಿತ್ರ ಯೋಜನೆಯಡಿಯಲ್ಲಿನ ಕ್ಷಯ ರೋಗಿಗೆ ಪೌಷ್ಟಿಕ ಆಹಾರ ಸಾಮಗ್ರಿಯನ್ನು ನೀಡಲಾಯಿತು.
ಈ ಸಂಧರ್ಭದಲ್ಲಿ ವಲಯದ ಅಧ್ಯಕ್ಷ ರಾಜೇಂದ್ರ ಕೆ. ವೈದ್ಯಧಿಕಾರಿ ಡಾ. ಅಶ್ವಿನಿ ಬಾಲಕೃಷ್ಣ, ಮಾಜಿ ಅಧ್ಯಕ್ಷ ಹರೀಶ್ ಕುಂದರ್, ಗೌರವಾಧ್ಯಕ್ಷ ಕಿಶೋರ್, ಕಾರ್ಯದರ್ಶಿ ರವಿ ಕಲ್ಪನೆ, ಉಪಾಧ್ಯಕ್ಷ ಹರೀಶ್ ನಾಟಿ, ಕೋಶಾಧಿಕಾರಿ ಕೃಷ್ಣ ರಾಜ್ ರಾವ್, ಛಾಯಾ ಕಾರ್ಯದರ್ಶಿ ಪ್ರಶಾಂತ್ ಕಲ್ಲಡ್ಕ ಹಾಗೂ ಆಸ್ಪತ್ರೆ ಯ ಸಿಬ್ಬಂದಿ ಗಳು ಉಪಸ್ಥಿತರಿದ್ದರು


Advertisement







