
ಬಂಟ್ವಾಳ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು, ಜ.ಕೆ.ಎಸ್. ಹೆಗ್ಡೆ ಚಾರಿಟೆಬಲ್ ಆಸ್ಪತ್ರೆ ಮಂಗಳೂರು ಇದರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಗ್ರಹದಲ್ಲಿ ಮಂಗಳವಾರ ಬೆಳಿಗ್ಗೆ ನಡೆಯಿತು.
ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲರ ಆದ್ಯ ಕರ್ತವ್ಯವಾಗಿದ್ದು ಜನರಲ್ಲಿ ಜಾಗೃತಿಯ ಪ್ರಜ್ಞೆ ಮೂಡಿಸುವ ಇಂತಹ ಕಾರ್ಯಕ್ರಮ ಪ್ರಸ್ತುತವಾಗಿದೆ.
ಗಿಡಗಳನ್ನು ನೆಡುವುದರ ಜೊತೆಗೆ ಅವುಗಳ ಪಾಲನೆಯ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮೂಲಕ ಪರಿಸರ ಸಂರಕ್ಷಣೆಗೆ ನಮ್ಮ ಕೊಡುಗೆಯನ್ನು ನೀಡಬೇಕು ಎಂದರು.

ಮೊಡಂಕಾಪು ದೀಪಿಕಾ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಹೆಬ್ಬಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮರದ ಮೇಲೆ ಕುಳಿತು ಬುಡ ಕಡಿಯುವ ಕಾಳಿದಾಸನ ಕತೆಯಂತೆ ಪ್ರಕೃತಿಯ ಮೇಲೆ ಹಾಕುವ ಒಂದೊಂದು ಕೊಡಲಿ ಪೆಟ್ಟು ನಮ್ಮ ಜೀವನಕ್ಕೆ ಹಾಕುತ್ತಿರುವ ಕೊಡಲಿ ಏಟು ಎನ್ನುವುದನ್ನು ನಾವು ಮರೆಯುತ್ತಿದ್ದೇವೆ ಎಂದರು.

ಸೇವಾಂಜಲಿ ದಂತ ಚಿಕಿತ್ಸಾ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರತೀಕ್ಷಾ ಕುಡ್ವ ಶುಭ ಹಾರೈಸಿದರು.
ಕೆ.ಎಸ್ ಹೆಗ್ಡೆ ಆಸ್ಪತ್ರೆಯ ಸಹಾಯಕ ಸೂಪರಿಂಟೆಂಡೆಂಟ್
ಡಾ. ಸಿರಾಲ್ ಹೆಗ್ಡೆ , ಸೇವಾಂಜಲಿ ಆರೋಗ್ಯ ಕೇಂದ್ರದ ವೈದ್ಯ ಡಾ. ಡಾ.ಚೇತನ್ ವೇದಿಕೆಯಲ್ಲಿದ್ದರು.


ಟ್ರಸ್ಟಿ ತಾರಾನಾಥ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು
ಕಾರ್ಯಕ್ರಮ ಸಂಯೋಜಕ ಅನಿಲ್ ಸನಿಲ್
ಪ್ರಮುಖರಾದ ಪ್ರಶಾಂತ್ ತುಂಬೆ, ನಾರಾಯಣ ಬಡ್ಡೂರು, ಶೇಖರ್, ಸಾರಮ್ಮ, ವಿಕ್ರಂ ಫರಂಗಿಪೇಟೆ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭ ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನ ಕಾರ್ಯಕ್ರಮದ ಅಂಗವಾಗಿ ಸೇವಾಂಜಲಿಯ ಪ್ರತಿಷ್ಠಾನದ ಆಶ್ರಯದಲ್ಲಿ ಉಚಿತ ಎಕ್ಸ್ ರೇ, ರೋಗ ನಿರ್ಣಯ ಶಿಬಿರವೂ ನಡೆಯಿತು. ಸಾರ್ವಜನಿಕರಿಗೆ ಗಿಡಗಳನ್ನು ವಿತರಿಸಲಾಯಿತು.


Advertisement







