ಬಂಟ್ವಾಳ : 51 ನೇ ವರ್ಷಕ್ಕೆ ಪಾದರ್ಪಣೆ ಮಾಡುತ್ತಿರುವ ಬಂಟ್ವಾಳ ರೋಟರಿ ಕ್ಲಬ್ನ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಬಿ.ಎ. ಸೋಮಯಾಜಿ ಮೆಮೊರಿಯಲ್ ಹಾಲ್ನಲ್ಲಿ ಶುಕ್ರವಾರ ಸಂಜೆ ನಡೆಯಿತು.
ನೂತನ ಅಧ್ಯಕ್ಷರಾಗಿ ಶಿವಾನಿ ಬಾಳಿಗ, ಕಾರ್ಯದರ್ಶಿಯಾಗಿ ಸ್ಮಿತಾ ಸಲ್ದಾನ, ಕೋಶಾಧಿಕಾರಿ ಯಾಗಿ ರವಿರಾಜ್ ಶೆಟ್ಟಿ ಮತ್ತಿತರ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.
ಪದಗ್ರಹಣ ಅಧಿಕಾರಿ, ನಿಯೋಜಿತ ಜಿಲ್ಲಾ ಗವರ್ನರ್ ರಂಗನಾಥ ಭಟ್ ಮಾತನಾಡಿ ಬಂಟ್ವಾಳ ರೋಟರಿ ಕ್ಲಬ್ ಕಳೆದ ಸಾಲಿನಲ್ಲಿ ವಿದ್ಯಾರ್ಥಿಗಳು ಹಾಗೂ ಸಮಾಜಕ್ಕೆ ಉಪಯೋಗವಾಗುವಂತಹ ಕಾರ್ಯಗಳನ್ನು ಮಾಡಿ ಸುವರ್ಣ ವರ್ಷಾಚರಣೆಯನ್ನು ಅರ್ಥಪೂರ್ಣಗೊಳಿದೆ ಎಂದರು. ಈ ಬಾರಿ ಕ್ಲಬ್ನ ಮೊದಲ ಮಹಿಳಾ ಅಧ್ಯಕ್ಷರು ಇನ್ನಷ್ಟು ಸಮಾಜಮುಖಿ ಕಾರ್ಯಗಳನ್ನು ನಡೆಸುವ ನಿರೀಕ್ಷೆ ಇದ್ದು ರೋಟರಿ ಕ್ಲಬ್ ಬಂಟ್ವಾಳದ ಕೀರ್ತಿ ಪತಾಕೆ ಇನ್ನಷ್ಟು ಉತ್ತುಂಗಕ್ಕೆ ಏರಲಿ ಎಂದು ಶುಭ ಹಾರೈಸಿದರು.
ನೂತನ ಅಧ್ಯಕ್ಷೆ ಶಿವಾನಿ ಬಾಳಿಗ ಮಾತನಾಡಿ ಜಿಲ್ಲಾ ಗವರ್ನರ್ ಅವರ ಜಿಲ್ಲಾ ಯೋಜನೆ ಜೀವನ ಸಂಧ್ಯಾ ಕಾರ್ಯಕ್ರಮ ನಡೆಸುವುದರ ಜೊತೆಗೆ ಸರಕಾರಿ ಶಾಲೆಗಳಲ್ಲಿ ಬಾಲಕಿರ ಶೌಚಾಲಯ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಹಾಗೂ ಮಹಿಳಾ ಸಬಲೀಕರಣದ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ತಿಳಿಸಿದರು.
ನಿರ್ಗಮನ ಅಧ್ಯಕ್ಷ ಮಂಜುನಾಥ ಆಚಾರ್ಯ ಮಾತನಾಡಿ ಎಲ್ಲಾ ಸದಸ್ಯರ ಸಹಕಾರದಿಂದ ಕಳೆದ ಅವಧಿಯಲ್ಲಿ ಸಾಕಷ್ಟು ಚಟುವಟಿಕೆಗಳನ್ನು ಮಾಡಲು ಸಾಧ್ಯವಾಗಿದೆ. ಸುವರ್ಣ ವರ್ಷದ ಸಂಭ್ರಮದಲ್ಲಿದ್ದ ಕ್ಲಬ್ಗೆ ಸಲ್ಲಿಸಿದ ಸೇವೆಯ ಬಗ್ಗೆ ಸಂತೃಪ್ತಿ ಇದೆ ಎಂದರು. ತನಗೆ ಸಹಕಾರ ನೀಡಿದ ಎಲ್ಲಾ ಸದಸ್ಯರನ್ನು ಸ್ಮರಿಸಿಕೊಂಡರು.
ಮುಖ್ಯ ಅತಿಥಿ ಡಾ. ಜಗನ್ನಾಥ ಶೆಣೈ ದಂಪತಿಯನ್ನು ಗೌರವಿಸಲಾಯಿತು. ವಲಯ ೪ರ ಸಹಾಯಕ ಗವರ್ನರ್ ರಿತೇಶ್ ಬಾಳಿಗ ಕ್ಲಬ್ ಬುಲೆಟಿನ್ ರೋಟ್ವಾಲಾ ಬಿಡುಗಡೆಗೊಳಿಸಿದರು. ನಿರ್ಗಮನ ಅಧ್ಯಕ್ಷ ಮಂಜುನಾಥ ಆಚಾರ್ಯ, ನೂತನ ಕಾರ್ಯದರ್ಶಿ ಸ್ಮಿತಾ ಸಲ್ದಾನ ವೇದಿಕೆಯಲ್ಲಿದ್ದರು. ಅಹಮ್ಮದ್ ಮುಸ್ತಾಫ ಕಾರ್ಯಕ್ರಮ ನಿರೂಪಿಸಿದರು.
ಬಂಟ್ವಾಳ : 51 ನೇ ವರ್ಷಕ್ಕೆ ಪಾದರ್ಪಣೆ ಮಾಡುತ್ತಿರುವ ಬಂಟ್ವಾಳ ರೋಟರಿ ಕ್ಲಬ್ನ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಬಿ.ಎ. ಸೋಮಯಾಜಿ ಮೆಮೊರಿಯಲ್ ಹಾಲ್ನಲ್ಲಿ ಶುಕ್ರವಾರ ಸಂಜೆ ನಡೆಯಿತು.
ನೂತನ ಅಧ್ಯಕ್ಷರಾಗಿ ಶಿವಾನಿ ಬಾಳಿಗ, ಕಾರ್ಯದರ್ಶಿಯಾಗಿ ಸ್ಮಿತಾ ಸಲ್ದಾನ, ಕೋಶಾಧಿಕಾರಿ ಯಾಗಿ ರವಿರಾಜ್ ಶೆಟ್ಟಿ ಮತ್ತಿತರ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.
ಪದಗ್ರಹಣ ಅಧಿಕಾರಿ, ನಿಯೋಜಿತ ಜಿಲ್ಲಾ ಗವರ್ನರ್ ರಂಗನಾಥ ಭಟ್ ಮಾತನಾಡಿ ಬಂಟ್ವಾಳ ರೋಟರಿ ಕ್ಲಬ್ ಕಳೆದ ಸಾಲಿನಲ್ಲಿ ವಿದ್ಯಾರ್ಥಿಗಳು ಹಾಗೂ ಸಮಾಜಕ್ಕೆ ಉಪಯೋಗವಾಗುವಂತಹ ಕಾರ್ಯಗಳನ್ನು ಮಾಡಿ ಸುವರ್ಣ ವರ್ಷಾಚರಣೆಯನ್ನು ಅರ್ಥಪೂರ್ಣಗೊಳಿದೆ ಎಂದರು. ಈ ಬಾರಿ ಕ್ಲಬ್ನ ಮೊದಲ ಮಹಿಳಾ ಅಧ್ಯಕ್ಷರು ಇನ್ನಷ್ಟು ಸಮಾಜಮುಖಿ ಕಾರ್ಯಗಳನ್ನು ನಡೆಸುವ ನಿರೀಕ್ಷೆ ಇದ್ದು ರೋಟರಿ ಕ್ಲಬ್ ಬಂಟ್ವಾಳದ ಕೀರ್ತಿ ಪತಾಕೆ ಇನ್ನಷ್ಟು ಉತ್ತುಂಗಕ್ಕೆ ಏರಲಿ ಎಂದು ಶುಭ ಹಾರೈಸಿದರು.
ನೂತನ ಅಧ್ಯಕ್ಷೆ ಶಿವಾನಿ ಬಾಳಿಗ ಮಾತನಾಡಿ ಜಿಲ್ಲಾ ಗವರ್ನರ್ ಅವರ ಜಿಲ್ಲಾ ಯೋಜನೆ ಜೀವನ ಸಂಧ್ಯಾ ಕಾರ್ಯಕ್ರಮ ನಡೆಸುವುದರ ಜೊತೆಗೆ ಸರಕಾರಿ ಶಾಲೆಗಳಲ್ಲಿ ಬಾಲಕಿರ ಶೌಚಾಲಯ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಹಾಗೂ ಮಹಿಳಾ ಸಬಲೀಕರಣದ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ತಿಳಿಸಿದರು.
ನಿರ್ಗಮನ ಅಧ್ಯಕ್ಷ ಮಂಜುನಾಥ ಆಚಾರ್ಯ ಮಾತನಾಡಿ ಎಲ್ಲಾ ಸದಸ್ಯರ ಸಹಕಾರದಿಂದ ಕಳೆದ ಅವಧಿಯಲ್ಲಿ ಸಾಕಷ್ಟು ಚಟುವಟಿಕೆಗಳನ್ನು ಮಾಡಲು ಸಾಧ್ಯವಾಗಿದೆ. ಸುವರ್ಣ ವರ್ಷದ ಸಂಭ್ರಮದಲ್ಲಿದ್ದ ಕ್ಲಬ್ಗೆ ಸಲ್ಲಿಸಿದ ಸೇವೆಯ ಬಗ್ಗೆ ಸಂತೃಪ್ತಿ ಇದೆ ಎಂದರು. ತನಗೆ ಸಹಕಾರ ನೀಡಿದ ಎಲ್ಲಾ ಸದಸ್ಯರನ್ನು ಸ್ಮರಿಸಿಕೊಂಡರು.
ಮುಖ್ಯ ಅತಿಥಿ ಡಾ. ಜಗನ್ನಾಥ ಶೆಣೈ ದಂಪತಿಯನ್ನು ಗೌರವಿಸಲಾಯಿತು.
ವಲಯ ೪ರ ಸಹಾಯಕ ಗವರ್ನರ್ ರಿತೇಶ್ ಬಾಳಿಗ ಕ್ಲಬ್ ಬುಲೆಟಿನ್ ರೋಟ್ವಾಲಾ ಬಿಡುಗಡೆಗೊಳಿಸಿದರು. ನಿರ್ಗಮನ ಅಧ್ಯಕ್ಷ ಮಂಜುನಾಥ ಆಚಾರ್ಯ, ನೂತನ ಕಾರ್ಯದರ್ಶಿ ಸ್ಮಿತಾ ಸಲ್ದಾನ ವೇದಿಕೆಯಲ್ಲಿದ್ದರು. ಅಹಮ್ಮದ್ ಮುಸ್ತಾಫ ಕಾರ್ಯಕ್ರಮ ನಿರೂಪಿಸಿದರು.