
ಬಂಟ್ವಾಳ: ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನದ ಅಂಗವಾಗಿ ಹಾಗೂ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಬೆಳ್ಳಿ ಹಬ್ಬದ ಪ್ರಯುಕ್ತ ಬೋಳಿಯಾರು ಗ್ರಾಮದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಉಚಿತ ಕನ್ನಡಕ ವಿತರಣಾ ಶಿಬಿರವು ಸೋಮವಾರ ನಡೆಯಿತು.
ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್ (ರಿ) ಒಡಿಯೂರು, ಶ್ರೀ ಗುರುದೇವದತ್ತ ಸಂಸ್ಥಾನಮ್ ಸಂಚಾಲಿತ ಒಡಿಯೂರು, ಶ್ರೀ ಗ್ರಾಮವಿಕಾಸ ಯೋಜನೆ ಬೋಳಿಯಾರು ಘಟ ಸಮಿತಿ ಕಲ್ಲಡ್ಕ ವಲಯ, ಒಡಿಯೂರು ಶ್ರೀ ಗುರುದೇವ ಭಜನಾ ಮಂದಿರ ಬೋಳಿಯಾರು, ಒಡಿಯೂರು ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಬೋಳಿಯಾರು, ಯುವ ಬಳಗ (ರಿ) ಬೋಳಿಯಾರು, ಶ್ರೀ ಗುರುದೇವ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ) ಒಡಿಯೂರು, ಒನ್ ಸೈಟ್ ಎಸ್ಸಿಲಾರ್ ಲಕ್ಸೋಟಿಕ್ ಫೌಂಡೇಶನ್ ಬೆಂಗಳೂರು ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು ಇವುಗಳ ಸಹಯೋಗದಲ್ಲಿ ಕಾರ್ಯಕ್ರಮಬಆಯೋಜಿಸಲಾಗಿತ್ತು.

ಬೋಳಿಯಾರು ಮಜಿ ಮಹಾಮ್ಮಾಯಿ ದೇವಸ್ಥಾನದ ಅರ್ಚಕ ಮನೋಹರ್ ಭಟ್ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿದರು. ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜಾವ, ಬೋಳಿಯಾರು ಯುವ ಬಳಗ (ರಿ) ಅಧ್ಯಕ್ಷ ಪ್ರಕಾಶ್ ಶೆಟ್ಟಿ ಬೋಳಿಯಾರು ಗುತ್ತು, ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಬೋಳಿಯಾರು ಇದರ ಅಧ್ಯಕ್ಷ ಶ್ರೀಧರ್ ಶೆಟ್ಟಿ ಕುಂಟುಪುಣಿ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಾತೇಶ್ ಭಂಡಾರಿ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮತ್ತು ವಜ್ರಮಾತ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ರಾಜೀವಿ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿದ್ದರು.
ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಲ್ಲಡ್ಕ ವಲಯದ ಸಂಯೋಜಕಿ ಸರಸ್ವತಿ ಶೆಟ್ಟಿ, ನರಿಕೊಂಬು ವಲಯದ ಸಂಯೋಜಕಿ ಸುನಿತಾ ಹಾಗೂ ಸೇವಾದೀಕ್ಷಿತರಾದ ಶ್ಯಾಮಲಾ, ಉಷಾ, ನಿಶಾ, ಗಾಯತ್ರಿ ಮತ್ತು ಎಲ್ಲಾ ಸೇವಾಬಳಗ ಹಾಗೂ ಯುವಬಳಗದ ಪದಾಧಿಕಾರಿಗಳು, ಸದಸ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಹೇಮಂತ್ ಸ್ವಾಗತಿಸಿ, ವಂದಿಸಿದರು., ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಮೇಲ್ವಿಚಾರಕಿ ಜಯಲಕ್ಷ್ಮಿ ಪ್ರಭು ಪ್ರಾಸ್ತಾವಿಕವಾಗಿ ಮಾತನಾಡಿದರು.
ಲಕ್ಷ್ಮೀಶ ಕಾರ್ಯಕ್ರಮವನ್ನು ನಿರೂಪಿಸಿದರು.
Advertisement







