
ಬಂಟ್ವಾಳ: ಸ್ನೇಹ ಮಿಲನ ಕಲ್ಲಡ್ಕ ಹಾಗೂ ರೋಟರಿ ಕ್ಲಬ್ ಬಂಟ್ವಾಳದ ಜಂಟಿ ಆಶ್ರಯದಲ್ಲಿ, ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಮಂಗಳೂರು ಇವರ ಸಹಭಾಗಿತ್ವದಲ್ಲಿ ಉಚಿತ ಹೃದಯ ತಪಾಸಣಾ ಶಿಬಿರ ಆ.23ರಂದು ಬಿ.ಸಿ.ರೋಡಿನ ರೋಟರಿ ಸಭಾಂಗಣದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಶಿಬಿರ ನಡೆಯಲಿದೆ.
ಶಿಬಿರದಲ್ಲಿ ಹೃದಯ ತಪಾಸಣೆಯ ಪ್ರಮುಖ ಭಾಗವಾದ ಇ.ಸಿ.ಜಿ., ಇಕೋ, ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣೆ ಸೇರಿದಂತೆ ವಿವಿಧ ಆರೋಗ್ಯ ತಪಾಸಣಾ ಸೌಲಭ್ಯಗಳು ಉಚಿತವಾಗಿ ಲಭ್ಯವಾಗಲಿವೆ.
ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ರೊ| ರವಿಚಂದ್ರ ಬಂಟ್ವಾಳ ಅಧ್ಯಕ್ಷತೆ ವಹಿಸುವರು. ಎ.ಜೆ. ವೈದ್ಯಕೀಯ ಮಹಾವಿದ್ಯಾಲಯದ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವಾಮನ್ ನಾಯಕ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಬಂಟ್ವಾಳ ತಾಲೂಕು ಗಾಣಿಗರ ಸೇವಾ ಸಂಘದ ಅಧ್ಯಕ್ಷ ಕೃಷ್ಣಪ್ಪ ಗಾಣಿಗ, ದುರ್ಗಾ ಫೆಸಿಲಿಟಿ ಮೆನೇಜ್ಮೆಂಟ್ ಸರ್ವಿಸಸ್ ಪ್ರೈ.ಲಿ.ಯ ವ್ಯವಸ್ಥಾಪಕ ನಿರ್ದೇಶಕ ಬೊಂಡಾಲ ಸಚ್ಚಿದಾನಂದ ಶೆಟ್ಟಿ, ನರಿಕೊಂಬು ಶ್ರೀ ನಾಲ್ಕೆತ್ತಾಯ ಪಂಜುರ್ಲಿ ನೇಮೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸ್ನೇಹ ಮಿಲನ ಕಲ್ಲಡ್ಕ ಅಧ್ಯಕ್ಷ ರವೀಂದ್ರ ಸಪಲ್ಯ, ರೋಟರಿ ಕ್ಲಬ್ ಬಂಟ್ವಾಳ ಕಾರ್ಯದರ್ಶಿ ರೊ| ರವಿರಾಜ್ ಶೆಟ್ಟಿ ಹಾಗೂ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿರುವರು.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಎರಡೂ ಸಂಘಟನೆಯ ಪ್ರಮುಖರು ಮನವಿ ಮಾಡಿದ್ದಾರೆ.
Advertisement







