
ಬಂಟ್ವಾಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದ.ಕ. ಜಿಲ್ಲಾ ಪಂಚಾಯತಿ ಉಪನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮಂಗಳೂರು, ಕೆನರಾ ಪ್ರೌಢಶಾಲೆ ಡೊಂಗರಕೇರಿ ಮಂಗಳೂರು ಇವರ ಸಹಯೋಗದಲ್ಲಿ ಮಂಗಳೂರಿನ ಅಶೋಕ್ ನಗರದ ಹೊಯ್ಗೆಬೈಲ್ನ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಪೊಳಲಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಗಿತೇಶ್ ಪ್ರಥಮ, ಮೊಡಂಕಾಪು ಇನ್ಪೇಂಟ್ ಜೀಸಸ್ ವಿದ್ಯಾಸಂಸ್ಥೆಯ ಡೆಲ್ವಿನ್ ಹಾಗೂ ಪೊಳಲಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಹಂಸಿಕಾ ತೃತೀಯ ಸ್ಥಾನವನ್ನು ಗೆದ್ದುಕೊಂಡಿದ್ದಾರೆ. ಸೈಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿ ರಿಶ್ವಾನ್ ಕುಲಾಲ್ ಪ್ರತ್ಯೇಕ ಎರಡು ವಿಭಾಗದಲ್ಲಿ ಪ್ರಥಮ ಹಾಗೂ ತೃತೀಯ ಸ್ಥಾನ ಗೆದ್ದುಕೊಂಡಿದ್ದಾರೆ.

ಈ ಎಲ್ಲಾ ವಿದ್ಯಾರ್ಥಿಗಳು ನೆತ್ತರಕೆರೆ ಸರಕಾರಿ ಶಾಲೆಯ ತರಬೇತಿ ಕೇಂದ್ರದಲ್ಲಿ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ನೆತ್ತರೆಕೆರೆ ಸರಕಾರಿ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ದಾಮೊದರ ನೆತ್ತರಕೆರೆ ಹಾಗೂ ಶಾಲಾ ಮುಖ್ಯೋಪಾಧ್ಯಾಯ ಸಿಲ್ವಿಯಾ ಬ್ರೇಕ್ ಸಹಕಾರ ನೀಡಿದ್ದಾರೆ.
Advertisement







