
ಬಂಟ್ವಾಳ: ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಉತ್ತಮ ವ್ಯವಹಾರ ನಡೆಸಿ ಸಾಧನೆ ಮಾಡಿರುವ ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಹನಾಧಿಕಾರಿ ಮಮತಾ ಜಿ.ಪ್ರಶಸ್ತಿ ಸ್ವೀಕರಿಸಿದರು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ ಆಡಳಿತ ಮಂಡಳಿ ಸದಸ್ಯರಾದ ಭಾಸ್ಕರ್ ಎಸ್.ಕೋಟ್ಯಾನ್, ಶಶಿಕುಮಾರ್ ರೈ ಬಿ, ಡಾ. ದೇವಿಪ್ರಸಾದ್ ಶೆಟ್ಟಿ, ಸದಾಶಿವ ಉಳ್ಳಾಲ್, ಎಂ. ಮಹೇಶ್ ಹೆಗ್ಡೆ, ಎಸ್.ಎನ್.ಮನ್ಮಥ ಹಾಗೂ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್.ಎನ್. ರಮೇಶ್ ಉಪಸ್ಥಿತರಿದ್ದರು. ದ.ಕ.ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಸಿಇಒ ಕಿಶೋರ್ ಹಾಗೂ ಸಂಘದ ಲೆಕ್ಕಿಗ ನಿಶ್ಮಿತಾ ಕೆ, ಶಾಖಾ ವ್ಯವಸ್ಥಾಪಕಿ ಅಕ್ಷತಾ ಹಾಗೂ ಶ್ರುತಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Advertisement







