
ಬಂಟ್ವಾಳ: ಇತ್ತೀಚೆಗೆ ಜೆಸಿಐ ಮಡಂತ್ಯಾರು ಅತಿಥ್ಯದಲ್ಲಿ ನಡೆದ ಜೆಸಿಐ ವಲಯ 15 ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನ 2026 ಕಾರ್ಯಕ್ರಮದಲ್ಲಿ ಜೆಸಿಐ ಬಂಟ್ವಾಳದ ಉಪಾಧ್ಯಕ್ಷ ಶ್ರೀನಿವಾಸ್ ಅರ್ಬಿಗುಡ್ಡೆಯವರಿಗೆ ಸಾಧನಾಶ್ರೀ ಪುರಸ್ಕಾರ ನೀಡಿ ಗೌರವಿಸಲಾಯಿತು.
ಈ ಸಂದರ್ಭ ವಲಯಾಧ್ಯಕ್ಷ ಸಂತೋಷ್ ಶೆಟ್ಟಿ, ವಲಯ ಉಪಾಧ್ಯಕ್ಷ ಕಾಶೀನಾಥ್ ಗೋಗಟೆ, ವಲಯ ನಿರ್ದೇಶಕ ವಿಕೇಶ್ ಮಾನ್ಯ, ಜೆಸಿಐ ಬಂಟ್ವಾಳದ ಅಧ್ಯಕ್ಷ ಕಿಶೋರ್ ಕುಮಾರ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
Advertisement







