
ಬಂಟ್ವಾಳ: ಶ್ರೀ ದೇವಿ ನೃತ್ಯಾರಾಧನಾ ಕಲಾ ಕೇಂದ್ರ ಪುತ್ತೂರು ಇದರ ನೃತ್ಯ ನಿರ್ದೇಶಕಿ ರೋಹಿಣಿ ಉದಯ್ ಅವರ ಶಿಷ್ಯೆಯಂದಿರಾದ ವಿದೂಷಿ ಶ್ರದ್ಧಾ ಹಾಗೂ ಶ್ರಮ್ಯ ಅವರ ಭರತನಾಟ್ಯ ರಂಗಪ್ರವೇಶ ಸೆ.13 ರಂದು ಸಂಜೆ 5 ಗಂಟೆಗೆ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಲಿದೆ.
ನಾಟ್ಯರಾಣಿ ಶಾಂತಲಾ ಪ್ರಶಸ್ತಿ ಪುರಸ್ಕೃತ ಕರ್ನಾಟಕ ಕಲಾಶ್ರೀ ನಾಟ್ಯಾಚಾರ್ಯ ಉಳ್ಳಾಲ ಮೋಹನ್ ಕುಮಾರ್ ದೀಪಪ್ರಜ್ವಲಿಸುವರು.

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು ಇದರ ನಿರ್ದೇಶಕಿ ಭಾರತಿ ಜಿ. ಭಟ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನುವಂಶಿಕ ಅರ್ಚಕ ವೆಂಕಟರಮಣ ಆಸ್ರಣ್ಣ,
ಸನಾತನ ನಾಟ್ಯಾಲಯ, ಮಂಗಳೂರು ಇದರ
ನೃತ್ಯ ಗುರುಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್, ದಾಯ್ಕಿವರ್ಲ್ಡ್ ಟಿವಿ ವಾಹಿನಿ ಸಂಸ್ಥಾಪಕ
ವಾಲ್ಟರ್ ನಂದಳಿಕೆ ಭಾಗವಹಿಸಲಿದ್ದಾರೆ.
Advertisement







