
ಬಂಟ್ವಾಳ: ಪ್ರತಿಷ್ಠಿತ ಸುದ್ದಿ ವಾಹಿನಿ ಝಿ ನ್ಯೂಸ್ ಕನ್ನಡ ಕೊಡಮಾಡುವ ರಾಜ್ಯಮಟ್ಟದ “ಕರ್ನಾಟಕ ಐಡಲ್ ಅವಾರ್ಡ್- 2026 ಪ್ರಶಸ್ತಿಗೆ ಉದ್ಯಮಿ, ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ
ಕೆ. ಸಂಜೀವ ಪೂಜಾರಿ ಕುಚ್ಚಿಗುಡ್ಡೆ ಆಯ್ಕೆಯಾಗಿದ್ದಾರೆ.
ಉದ್ಯಮ ಹಾಗೂ ಸಹಕಾರಿ ಕ್ಷೇತ್ರದಲ್ಲಿನ ವಿಶೇಷ ಸಾಧನೆಗಾಗಿ ಈ ಪ್ರಶಸ್ತಿ ಲಭಿಸಿದ್ದು ಸೆ.16 ರಂದು ಬೆಂಗಳೂರಿನ ದಿ ಲಲಿತ್ ಅಶೋಕ್ ನಲ್ಲಿ ನಡೆಯಲಿರುವ ಅದ್ದೂರಿ ಸಮಾರಂಭದಲ್ಲಿ ಗಣ್ಯರ ಸಮಕ್ಷಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಹಾಗೂ ದ.ಕ.ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷರಾಗಿ ಸಹಕಾರಿ ಕ್ಷೇತ್ರದಲ್ಲಿ ಅವರ ಕೊಡುಗೆ ಅಪಾರವಾದುದು. ಮಾತ್ರವಲ್ಲದೆ ಸಾಮಾಜಿಕ, ರಾಜಕೀಯ, ಧಾರ್ಮಿಕ, ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಾರೆ. ಇವರ ಈ ಎಲ್ಲಾ ಸಾಧನೆ ಹಾಗೂ ಸಹಕಾರಿ ಕ್ಷೇತ್ರದ ಸಾಧನೆಯನ್ನು ಪರಿಗಣಿಸಿ ಝೀ ನ್ಯೂಸ್ ಕನ್ನಡ ಈ ಪ್ರಶಸ್ತಿಗೆ ಆಯ್ಕೆ ಮಾಡಿರುವುದಾಗಿ ತಿಳಿದು ಬಂದಿದೆ.
Advertisement







