
ಬಂಟ್ವಾಳ: ದೇವರ ಪೂಜೆಯೊಂದಿಗೆ ಬಡವರ ಸೇವೆ ಮಾಡುವುದು ದೇವರ ಸೇವೆ ಮಾಡಿದಂತೆ. ಶ್ರೀ ಶಾರದಾ ಸೇವಾ ಟ್ರಸ್ಟ್ ಶ್ರೀ ಶಾರದೆಯ ಆರಾಧನೆಯೊಂದಿಗೆ
ಸದಕಾರಿ ಶಾಲೆಯನ್ನು ದತ್ತು ಪಡೆದಿರುವುದು ಶ್ರೇಷ್ಠ ಕಾರ್ಯ ಎಂದು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ರವಿಶಂಕರ್ ಶೆಟ್ಟಿ ಬಡಾಜೆ ಹೇಳಿದರು.
ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸೇವಾ ಸಮಿತಿ, ಶ್ರೀ ಶಾರದ ಸೇವಾ ಟ್ರಸ್ಟ್ ಹಾಗೂ ದಶಮಾನೋತ್ಸವ ಸಮಿತಿ ಆಶ್ರಯದಲ್ಲಿ ಮೂಡುಪಡುಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶ್ರೀ ಶಾರದೋತ್ಸವದ ದಶಮಾನೋತ್ಸವ “ದಶಾರದ ಸಂಭ್ರಮ-2026” ರ ಎರಡನೇ ದಿನದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಮಾತನಾಡಿ ಸ್ವಾತಂತ್ತ್ಯೋತ್ಸವದ ಸಂದರ್ಭ ಜನರ ಸಂಘಟನೆಗಾಗಿ ಸಾರ್ವಜನಿಕ ಉತ್ಸವಗಳು ಆರಂಭವಾದರೂ ಜಾತಿ, ಧರ್ಮಗಳನ್ನು ಮೀರಿ ನಾವೆಲ್ಲರೂ ಒಂದೇ ಎನ್ನುವ ಭಾವನೆ ಮೂಡಿಸುವ ನಿಟ್ಟಿನಲ್ಲಿ ಇಂದು ಕೂಡ ಉತ್ಸವಗಳನ್ನು ಸಾರ್ವಜನಿಕವಾಗಿ ನಡೆಸುವ ಅಗತ್ಯ ಇದೆ ಎಂದು ತಿಳಿಸಿದರು.ಶಾಲೆಯ ಅಭಿವೃದ್ಧಿ ಗಾಗಿ ಮಾಡುವ ಕೆಲಸ ದೇವರ ಕೆಲಸ. ಉತ್ಸವದ ಮೂಲಕ ಸಂಘಟನೆ ಸಾಧ್ಯವಿದೆ. ಶಾರದಾ ಸೇವಾ ಟ್ರಸ್ಟ್ ಸೇವಾ ಕಾರ್ಯಕ್ರಮ ಮಾಡುತ್ತಿರುವುದು ಅಭಿನಂದನೀಯ ಎಂದರು.

ಕಾರ್ಯಕ್ರಮದಲ್ಲಿ ಉದ್ಯಮಿ ಧೀರಜ್ ನಾಯ್ಕ್, ಪಟ್ಲ ಫೌಂಡೇಶನ್ ಅಧ್ಯಕ್ಷ ಭಾಗವತ ಪಟ್ಲ ಸತೀಶ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.
ಸೇವ್ ಲೈಫ್ ಚಾರೀಟೇಬಲ್ ಅಧ್ಯಕ್ಷ ಅರ್ಜುನ್ ಭಂಡಾರ್ಕರ್, , ಮಂಗಳೂರು ಮಯೂರ ಪ್ರತಿಷ್ಠಾನದ ಅಧ್ಯಕ್ಷ ಸದಾಶಿವ ಐತಾಳ್ ಕೃಷ್ಣಾಪುರ ಅತಿಥಿಯಾಗಿ ಭಾಗವಹಿಸಿದ್ದರು. ಟ್ರಸ್ಟ್ ಕಾರ್ಯಾಧ್ಯಕ್ಷ ಟಿ.ಹರೀಂದ್ರ ಪೈ,
ಸಂಚಾಲಕ ಮೋಹನ್ ಶೆಟ್ಟಿ ನರ್ವಲ್ದಡ್ಡ ಉಪಸ್ಥಿತರಿದ್ದರು

ಶ್ರೀ ಶಾರದಾ ಸೇವಾ ಟ್ರಸ್ಟ್ ಅಧ್ಯಕ್ಷ ಡಾ.ರಾಮಕೃಷ್ಣ ಎಸ್. ಸ್ವಾಗತಿಸಿದರು. ದಶಮಾನೋತ್ಸವ ಸಾಂಸ್ಕ್ರತಿಕ ಸಮಿತಿ ಸಂಚಾಲಕ ಗೋಪಾಲ ಅಂಚನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಟ್ರಸ್ಟ್ ಕಾರ್ಯದರ್ಶಿ ದಯಾನಂದ ಎಸ್.ಎರ್ಮೆನಾಡು ಕಾರ್ಯಕ್ರಮ ನಿರೂಪಿಸಿದರು. ತಾಲೂಕು ಮಟ್ಟದ ಭಜನಾ ಸ್ಪರ್ಧೆಯ ಫಲಿತಾಂಶವನ್ನು ಶಿಕ್ಷಕ ಹರೀಪ್ರಸಾದ್ ಆರ್ ಮತ್ತು ಚಿತ್ರಕಲಾ ಸ್ಪರ್ಧೆಯ ಫಲಿತಾಂಶವನ್ನು ಚಿತ್ರಕಲಾ ಶಿಕ್ಷಕ ಮುರಲೀಕೃಷ್ಣ ರಾವ್ ವಾಚಿಸಿದರು. ಟ್ರಸ್ಟ್ ಉಪಾಧ್ಯಕ್ಷ ಶೇಖರ್ ಪೂಜಾರಿ ಅಗಲ್ದೋಡಿ, ಶ್ರೀ ಶಾರದೋತ್ಸವ ಸೇವಾ ಸಮಿತಿ ಅಧ್ಯಕ್ಷ ಸುದೀಂದ್ರ ಶೆಟ್ಟಿ ಎರ್ಮೆನಾಡು, ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ನಾಯ್ಕ ಎರ್ಮೆನಾಡು, ದಶಮಾನೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಪೂಜಾರಿ ಬೆನಕ, ಸಂಚಾಲಕ ಶಂಕರ ಶೆಟ್ಟಿ ಬೆದ್ರಮಾರು, ಟ್ರಸ್ಟ್ ಮಂಡಳಿಯ ಸದಸ್ಯರಾಗಿರುವ ಸುಪ್ರೀತ್ ಜೈನ್ ಎಡ್ತೂರುಗುತ್ತು, ಪ್ರಶಾಂತ್ ಕೋಟ್ಯಾನ್ ಮೇಗಿನಮನೆ, ಹರೀಶ ಪೂಜಾರಿ ಎರ್ಮೆನಾಡು, ಪ್ರಶಾಂತ ದೇವಾಡಿಗ ಹಲೆಪ್ಪಾಡಿ ಮತ್ತಿತರರು ಉಪಸ್ಥಿತರಿದ್ದರು. ನಂತರ ಯಕ್ಷಗಾನ ತಾಳಮದ್ದಳೆ, ಸಂಜೆ ಶ್ರೀ ಶಾರದಾ ದೇವಿಯ ವೈಭವದ ಶೋಭಾಯಾತ್ರೆ ನಡೆಯಿತು.
Advertisement







