
ಬಂಟ್ವಾಳ : ಇಲ್ಲಿನ ಸಿದ್ಧಕಟ್ಟೆ ಸಮೀಪದ ಕೊಡಂಗೆ ಎಂಬಲ್ಲಿ 4ನೇ ವರ್ಷದ ವೀರ – ವಿಕ್ರಮ ಜೋಡುಕರೆ ಬಯಲು ಕಂಬಳ ನ. 21ರಂದು ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಸಂದೀಪ್ ಶೆಟ್ಟಿ ಪೊಡುಂಬ ಹೇಳಿದರು.
ಸಿದ್ದಕಟ್ಟೆ ಕೊಡಂಗೆ ವೀರ – ವಿಕ್ರಮ ಜೋಡುಕರೆ ಬಳಿ ಗುರುವಾರ ಸಂಜೆ ಆಮಂತ್ರಣ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಈ ಬಗ್ಗೆ ಸ್ಥಳೀಯ ಪೂಂಜ ಶ್ರೀ ಪಂಚದುರ್ಗಪರಮೇಶ್ವರೀ ದೇವಸ್ಥಾನದಲ್ಲಿ ಗುರುವಾರ ಬೆಳಿಗ್ಗೆ ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ ಅವರು ವಿಶೇಷ ಪೂಜೆ ನೆರವೇರಿಸಿದ್ದು, ಒಂದೇ ವರ್ಷದಲ್ಲಿ 3 ಕಂಬಳ ನಡೆಸಿದ ಹೆಗ್ಗಳಿಕೆ ನಮ್ಮ ಕಂಬಳ ಸಮಿತಿಗೆ ಇದೆ ಎಂದು ಅವರು ತಿಳಿಸಿದರು.
ಸಮಿತಿ ಪ್ರಧಾನ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಕಲ್ಲಾಪು, ವಕೀಲ ಸುರೇಶ್ ಶೆಟ್ಟಿ ಸಿದ್ದಕಟ್ಟೆ,
ಪ್ರಮುಖರಾದ ಬಾಬು ರಾಜೇಂದ್ರ ಶೆಟ್ಟಿ, ಕಿರಣ್ ಕುಮಾರ್ ಮಂಜಿಲ, ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಸಂದೇಶ್ ಶೆಟ್ಟಿ ಪೊಡುಂಬ, ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ಕೊರಗಪ್ಪ ಪೂಜಾರಿ, ಉಮೇಶ್ ಶೆಟ್ಟಿ ಕೊನೆರೊಟ್ಟು, ಜನಾರ್ದನ ಬಂಗೇರ, ರಾಜೇಶ್ ಶೆಟ್ಟಿ ಕೊನೆರೊಟ್ಟು, ನವೀನ್ ಹೆಗ್ಡೆ, ಚಂದ್ರಶೇಖರ್ ಪೂಜಾರಿ, ಮಧುಸೂಧನ್ ಸಾಲ್ಯಾನ್, ಉಮೇಶ್ ಹಿಂಗಾಣಿ, ದೇವರಾಜ ಸಾಲ್ಯಾನ್ ಮತ್ತಿತರರು ಭಾಗವಹಿಸಿದ್ದರು.
Advertisement







