ಬಂಟ್ವಾಳ: ಬಂಟ್ವಾಳ ಸರಕಾರಿ ಆಸ್ಪತ್ರೆಯ ಡಿ ಗ್ರೂಪ್ ನೌಕರರು ದಿಡೀರ್ ಧರಣಿ ಸತ್ಯಗ್ರಾಹ ಆರಂಭಿಸಿದ್ದಾರೆ. ಕಳೆದ ನಾಲ್ಕು ತಿಂಗಳಿನಿಂದ ವೇತನ ಪಾವತಿಯಾಗದೆ ಇಲ್ಲಿನ ಡಿ ಗ್ರೂಪ್ ನೌಕರರು ತೊಂದರೆ ಅನುಭವಿಸುತ್ತಿದ್ದು ಇಲಾಖಾ ಅಧಿಕಾರಿಗಳು ಮೌನ ವಹಿಸಿದ್ದಾರೆ.
ಸರಿಯಾಗಿ ವೇತನ ಪಾವತಿಯಾಗದ ಹಿನ್ನಲೆಯಲ್ಲಿ ಕುಟುಂಬ ನಿರ್ವಹಣೆ ಕಷ್ಟವಾಗಿದ್ದು ಮನೆಗೆ ಆಹಾರ ಸಾಮಾಗ್ರಿ ಕೊಂಡೊಗಲು ಸಾಧ್ಯವಾಗುತ್ತಿಲ್ಲ. ನಾವು ಆಸ್ಪತ್ರೆಯಲ್ಲಿಯೇ ಕೆಲಸ ಮಾಡುತ್ತಿದ್ದರೂ ನಮ್ಮ ಮನೆಮಂದಿಗೆ ಅನಾರೋಗ್ಯ ಬಾದಿಸಿದಾಗ ಔಷದಿ ಕೊಂಡೊಗಲು ಸಾಧ್ಯವಾಗುತ್ತಿಲ್ಲ, ಮಕ್ಕಳನ್ನು ಶಾಲೆಗೆ ಕಳುಹಿಸಲಾಗದೆ ಮನೆಯಲ್ಲಿಯೇ ಉಳಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ಪ್ರತಿಭಟನಾಕಾರರು ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಈಗಾಗಲೇ ಬಂಟ್ವಾಳ ಶಾಸಕರಿಗೆ, ಲೋಕಾಯುಕ್ತರಿಗೆ, ಆರೋಗ್ಯ ಇಲಾಖೆಯ ಅಧಿಕಾರಿ ಗಳಿಗೆ ಮನವಿ ಸಲ್ಲಿಸಿದರು ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಆದ್ದರಿಂದ ಪ್ರತಿಭಟನೆ ಆರಂಭಿಸಿದ್ದು ವೇತನ ಸಿಗುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಧರಣಿ ನಿರತರು ತಿಳಿಸಿದ್ದಾರೆ. ಡಿ ಗ್ರೂಪ್ ನೌಕರರ ದಿಡೀರ್ ಪ್ರತಿಭಟನೆಯಿಂದಾಗಿ ಬಂಟ್ವಾಳ ಆಸ್ಪತ್ರೆಗೆ ಬಂದ ರೋಗಿಗಳು ತೊಂದರೆ ಅನುಭವಿಸುವಂತಾಗಿದೆ
ಬಂಟ್ವಾಳ ಸರಕಾರಿ ಆಸ್ಪತ್ರೆ ಡಿ ಗ್ರೂಪ್ ನೌಕರರಿಂದ ದಿಢೀರ್ ಪ್ರತಿಭಟನೆ
