ಬಂಟ್ವಾಳ: ಅಲ್ಕಾರ್ಗೊ ಲಾಜಿಸ್ಟಿಕ್ ಲಿ. ಮಂಗಳೂರು, ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ ಮಂಗಳೂರು, ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ದಡ್ಡಲಕಾಡು, ಲಯನ್ಸ್ ಕ್ಲಬ್ ಬಂಟ್ವಾಳ, ಜೆಸಿಐ ಬಂಟ್ವಾಳ, ಶಾಲಾಭಿವೃದ್ದಿ ಸಮಿತಿ ದಡ್ಡಲಕಾಡು ಹಾಗೂ ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣ ಶಿಬಿರ ರವಿವಾರ ದಡ್ಡಲಕಾಡು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಶ್ರೀದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಶಿಬಿರ ಉದ್ಘಾಟಿಸಿದರು. ಅವರು ಮಾತನಾಡಿ ಸರಕಾರಿ ಶಾಲೆ, ಸರಕಾರಿ ಆಸ್ಪತ್ರೆಯ ಬಗ್ಗೆ ಜನರಲ್ಲಿರುವ ನಕರಾತ್ಮಕ ಭಾವನೆ ದೂರವಾಗಬೇಕು ಅದು ನಮ್ಮದೇ ಎನ್ನುವ ವಿಶಾಲ ಮನೋಭಾವ ಬರಬೇಕು ಎಂದರು. ವೈದ್ಯಕೀಯ ಶಿಬರದ ಪ್ರಯೋಜನವನ್ನು ಪಡೆಯುವ ಮೂಲಕ ನಮ್ಮ ಆರೋಗ್ಯವನ್ನು ವೃದ್ದಿಸಿಕೊಳ್ಳಬೇಕು ಎಂದರು. ಮುಖ್ಯ ಅತಿಥಿಯಾಗಿದ್ದ ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮಾತನಾಡಿ ಗ್ರಾಮೀಣ ಜನರಿಗೆ ಪ್ರಯೋಜನ ಸಿಗಬೇಕು ಎನ್ನುವ ಉದ್ದೇಶದಿಂದ ಈ ಶಿಬಿರವನ್ನು ಉಚಿತವಾಗಿ ಸಂಯೋಜಿಸಲಾಗುತ್ತಿದೆ ಎಂದರು.
ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಮಚಂದ್ರ ಪೂಜಾರಿ ಕರೆಂಕಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜೇಸಿಐ ಬಂಟ್ವಾಳದ ಅಧ್ಯಕ್ಷ ಯತೀಶ್ ಕರ್ಕೇರಾ, ಕೆಎಂಸಿ ಆಸ್ಪತ್ರೆಯ ಶಿಬಿರ ಸಂಯೋಜಕ ಹರ್ಬರ್ಟ್, ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ನ ಟ್ರಸ್ಟಿ ಪುರುಷೋತ್ತಮ ಅಂಚನ್, ಮುಖ್ಯ ಶಿಕ್ಷಕ ಮೌರೀಸ್ ಡಿಸೋಜಾ, ಸಹ ಶಿಕ್ಷಕಿ ಹಿಲ್ಡಾ ಫೆರ್ನಾಂಡೀಸ್, ಆಲ್ ಕಾಗೋ ಲಾಜಿಸ್ಟಿಕ್ನ ಕಿರಿಯ ಕಾರ್ಯನಿರ್ವಾಹಣಾಧಿಕಾರಿ ಸವಿಸ್ತಾರ್ ಆಳ್ವ, ಪಂಜಿಕಲ್ಲು ಗ್ರಾ.ಪಂ. ಉಪಾಧ್ಯಕ್ಷೆ ರೂಪಶ್ರೀ ಲೋಕನಾಥ್, ಲಯನ್ಸ್ ಕ್ಲಬ್ ಕಾರ್ಯದರ್ಶಿ ರಾಧಕೃಷ್ಣ ಬಂಟ್ವಾಳ ಮೊದಲಾದವರು ಉಪಸ್ಥಿತರಿದ್ದರು.
ಪ್ರಜ್ಞಾ ಸಲಹಾ ಕೇಂದ್ರದ ಯೋಜನಾ ಸಂಯೋಜಕ ವಿಲಿಯಂ ಸ್ಯಾಮುವೆಲ್ ಪ್ರಾಸ್ತವಿಕವಾಗಿ ಮಾತನಾಡಿದರು. ಅಶೋಕ್ ಸ್ವಾಗತಿಸಿದರು, ಶಾಲೆಯ ದೈಹಿಕ ಶಿಕ್ಷಕ ಸುರೇಶ್ ಶೆಟ್ಟಿ ವಂದಿಸಿದರು. ಪ್ರಜ್ಞಾ ಸಲಹಾ ಕೇಂದ್ರ ವಲಯ ಸಂಯೋಜಕ ಪ್ರದೀಪ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು. 260 ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು.