ಬಂಟ್ವಾಳ: ರೋಟರಿ ಕ್ಲಬ್ ವಲಯ 4 ರ ಸಾಂಸ್ಕೃತಿಕ ಕಾರ್ಯಕ್ರಮ ರೋಟರಿಕ್ಲಬ್ ಮೂಡಬಿದಿರೆ ಟೆಂಪಲ್ ಟೌನ್ ಆಶ್ರಯದಲ್ಲಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆದಿದ್ದು ಅದರಲ್ಲಿ ಪುರುಷರ ವೈಯಕ್ತಿಕ ವಿಭಾಗದ ಗಾಯನ ಸ್ಪರ್ಧೆಯಲ್ಲಿ ಬಂಟ್ವಾಳ ರೋಟರಿ ಕ್ಲಬ್ ಸದಸ್ಯ ವಸಂತ ಪ್ರಭು ದ್ವಿತೀಯ ಸ್ಥಾನವನ್ನು ಗೆದ್ದುಕೊಂಡಿದ್ದಾರೆ. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ವೈಯಕ್ತಿಕ ನೃತ್ಯ ಸ್ಪರ್ಧೆಯಲ್ಲಿ ಪ್ರಣಮ್ಯ ಪ್ರಥಮ ಸ್ಥಾನ ತನ್ನದಾಗಿಸಿಕೊಂಡಿದ್ದಾರೆ. ಮಹಿಳೆಯರ ವಿಭಾಗದ ವೈಯಕ್ತಿಕ ಗಾಯನ ಸ್ಪರ್ಧೆಯಲ್ಲಿ ಮಲ್ಲಿಕಾ ಶೆಟ್ಟಿ ತೃತೀಯ ಸ್ಥಾನ ಹಾಗೂ 14 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನವರ ವೈಯಕ್ತಿಕ ವಿಭಾಗದ ಗಾಯನ ಸ್ಪರ್ಧೆಯಲ್ಲಿ ಮಹಿಮಾ ತೃತೀಯ ಸ್ಥಾನ ಪಡೆದರೆ 14 ವರ್ಷ ಕೆಳಗಿನವರ ವಿಭಾಗದಲ್ಲಿ ಸಾನ್ವಿ ತೃತೀಯ ಸ್ಥಾನ ಗೆದ್ದುಕೊಂಡರು.
ರೋಟರಿ ಕ್ಲಬ್ ವಲಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬಹುಮಾನ ಗೆದ್ದ ಬಂಟ್ವಾಳ ರೋಟರಿ ಕ್ಲಬ್
