ಬಂಟ್ವಾಳ: ಕುರಿಯಾಳ ಗ್ರಾಮದ ಶ್ರೀ ಓಂಕಾರೇಶ್ವರೀ ದೇವಿ ಭಜನಾ ಮಂದಿರದ ನಿಧಿ ಕುಂಭ ಸಹಿತ ಶಿಲಾನ್ಯಾಸ ಸಮಾರಂಭ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನ.14ರಂದು ಬೆಳಿಗ್ಗೆ 9.10ರ ಧನುರ್ಲಗ್ನ ಸುಮುಹೂರ್ತದಲ್ಲಿ ನಡೆಯಲಿದೆ.
ದೈವಜ್ಞರಾದ ಡಾ. ಬಿ.ಕೆ. ಮೋನಪ್ಪ ಆಚಾರ್ಯ ರಾಯಿ ಹಾಗೂ ವೇದಮೂರ್ತಿ ಸುದರ್ಶನ ಬಲ್ಲಾಳ್ ನಾವೂರು ಉಪಸ್ಥಿತಿಯಲ್ಲಿ ನಿಧಿ ಕುಂಭ ಸಹಿತ ಶಿಲಾನ್ಯಾಸ ನಡೆಯಲಿದೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಗುರುಪುರ ಶ್ರೀ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು, ಮಾಜಿ ಸಚಿವ ಬಿ. ರಮಾನಾಥ ರೈ, ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಜೀಣೋದ್ಧಾರ ಸಮಿತಿ ಅಧ್ಯಕ್ಷ ವಸಂತಕುಮಾರ್ ವಿ ಮಣಿಹಳ್ಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ.14: ಕುರಿಯಾಳ ದುರ್ಗಾನಗರದ ಶ್ರೀ ಓಂಕಾರೇಶ್ವರೀ ದೇವಿ ಭಜನಾ ಮಂದಿರದ ನಿಧಿ ಕುಂಭ ಸಹಿತ ಶಿಲಾನ್ಯಾಸ ಸಮಾರಂಭ
