ಬಂಟ್ವಾಳ: ವಿಶ್ವಕರ್ಮ ಸಮಾಜ ಸೇವಾ ಸಂಘ ಬಂಟ್ವಾಳ ಹಾಗೂ ವಿಶ್ವಜ್ಯೋತಿ ಮಹಿಳಾ ಮಂಡಳಿ ಇದರ ಆಶ್ರಯದಲ್ಲಿ ಕ್ರೀಡೋತ್ಸವ ಫೆ.2ರಂದು ಆದಿತ್ಯವಾರ ಅಮ್ಟಾಡಿ ಗ್ರಾಮದ ಅಜೆಕಲದಲ್ಲಿ ನೂತನವಾಗಿ ನಿರ್ಮಿಸಿರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ ಅಧ್ಯಕ್ಷತೆಯಲ್ಲಿ ಕ್ರೀಡಾ ಕಾರ್ಯದರ್ಶಿ ಚಂದ್ರಶೇಖರ ಆಚಾರ್ಯ ಪೂಂಜರಕೋಡಿ ದೀಪ ಪ್ರಜ್ವಲಿಸುವರು. ಮುಖ್ಯ ಅತಿಥಿಗಳಾಗಿ ಬೆಸೆಂಟ್ ಹೈಸ್ಕೂಲ್ನ ನಿವೃತ್ತ ಮುಖ್ಯೋಪಾಧ್ಯಾಯಿನಿ ರತ್ನಾವತಿ ಜೆ. ಬೈಕಾಡಿ, ಗಿರಿಜಾ ಪುರುಷೋತ್ತಮ ಆಚಾರ್ಯ, ಪಂಚಾಯತಿ ರಾಜ್ ಇಂಜಿನಿಯರಿಂಗ್ ವಿಭಾಗದ ಕಿರಿಯ ಇಂಜಿನಿಯರ್ ಕೃಷ್ಣ ಪತ್ತಾರ್, ವಿಶ್ವಜ್ಯೋತಿ ಮಹಿಳಾ ಮಂಡಳಿ ಅಧ್ಯಕ್ಷೆ ಪುಷ್ಪ ಡಿ ಆಚಾರ್ಯ, ಉಪಾಧ್ಯಕ್ಷ ಯಶೋಧರ ಆಚಾರ್ಯ ಪೂಪಾಡಿಕಟ್ಟೆ ಭಾಗವಹಿಸುವರು. ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷ ಸುಧಾಕರ ಆಚಾರ್ಯ ಮಾರ್ನಬೈಲು ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಅಂತರಾಷ್ಟ್ರೀಯ ಕ್ರೀಡಾಪಟು ಪ್ರದೀಪ್ ಆಚಾರ್ಯ ಮಂಗಳೂರು, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಅಭಿಯಂತರ ಶಿವಪ್ರಸನ್ನ ಆಚಾರ್ಯ, ಉದ್ಯಮಿ ಪ್ರಭಾಕರ ಆಚಾರ್ಯ, ಮುಡಿಪು ವಿಶ್ವಕರ್ಮ ಸಂಘದ ಅಧ್ಯಕ್ಷ ಯೋಗೀಶ್ ಆಚಾರ್ಯ ಇರಾ, ಕಟ್ಟಡ ಸಮಿತಿ ಗೌರವಾಧ್ಯಕ್ಷ ಲೋಕೇಶ್ ಆಚಾರ್ಯ ಪುಂಜಾಲಕಟ್ಟೆ, ಸಂಘದ ಗೌರವಾಧ್ಯಕ್ಷ ಮನೋಜ್ ಆಚಾರ್ಯ ನಾಣ್ಯ ಉಪಸ್ಥಿತರಿರುವರು.
ಫೆ.2: ಬಂಟ್ವಾಳ ವಿಶ್ವಕರ್ಮ ಸಮಾಜ ಸೇವಾ ಸಂಘದ ಕ್ರೀಡೋತ್ಸವ
