ಬಂಟ್ವಾಳ: ಜೇಸಿಐ ಬಂಟ್ವಾಳದ ಆಶ್ರಯದಲ್ಲಿ ನೆನೆಪಿನ ತಂತ್ರಗಳು ಹಾಗೂ ಪರೀಕ್ಷಾ ಸಿದ್ದತೆಯ ಬಗ್ಗೆ ತರಬೇತಿ ಕಾರ್ಯಗಾರ ವಾಮದಪದವಿನ ಸರಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆಯಿತು.
ಸರಕಾರಿ ಪದವಿ ಕಾಲೇಜು ಬಂಟ್ವಾಳ ಇಲ್ಲಿನ ಸಹಾಯಕ ಪ್ರಾಧ್ಯಪಕ ಪ್ರೊ. ನಂದಕಿಶೋರ್ ತರಬೇತಿ ಕಾರ್ಯಗಾರ ನಡೆಸಿಕೊಟ್ಟರು. ಜೇಸಿಐ ಬಂಟ್ವಾಳದ ಅಧ್ಯಕ್ಷ ಸದಾನಂದ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಉಪಪ್ರಾಂಶುಪಾಲ ರಾಘವೇಂದ್ರ ಬಲ್ಲಾಳ್, ಎಸ್ಡಿಎಂಸಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಕಕ್ಕಿಬೆಟ್ಟು, ಜೇಸಿ ಬಂಟ್ವಾಳದ ನಿಕಟಪೂರ್ವ ಅಧ್ಯಕ್ಷ ಯತೀಶ್ ಕರ್ಕೇರಾ ಉಪಸ್ಥಿತರಿದ್ದರು. ಪೂರ್ವಾಧ್ಯಕ್ಷ ಸಂದೀಪ್ ಸಾಲ್ಯಾನ್ ಪ್ರಾಸ್ತವಿಕವಾಗಿ ಮಾತನಾಡಿದರು. ಪೂರ್ವಾಧ್ಯಕ್ಷ ಸಂತೋಷ್ ಜೈನ್ ಕಾರ್ಯಕ್ರಮ ಸಂಯೋಜಿಸಿದರು.
ವಾಮದಪದವು ಸರಕಾರಿ ಪ್ರೌಢಶಾಲೆಯಲ್ಲಿ ಜೇಸಿಐ ಬಂಟ್ವಾಳದ ವತಿಯಿಂದ ತರಬೇತಿ ಕಾರ್ಯಗಾರ
