ಬಂಟ್ವಾಳ: ಇಲ್ಲಿನ ಪುರಸಭೆಯ ಆಶ್ರಯದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಪುರಸಭೆ ಸಭಾಂಗಣದಲ್ಲಿ ಆಚರಿಸಲಾಯಿತು.
ಮುಖ್ಯಾಧಿಕಾರಿ ಲೀನಾ ಬಿಟ್ಟೋ ಕಾರ್ಯಕ್ರಮ ಉದ್ಘಾಟಿಸಿದರು. ಸಹಕಾರಿ ಒಕ್ಕೂಟದ ಅಧ್ಯಕ್ಷೆ ವಸಂತಿ ಅಧ್ಯಕ್ಷತೆ ವಹಿಸಿದ್ದರು. ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ವಾಣಿಶ್ರೀ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಬಗ್ಗೆ ಮಾತನಾಡಿದರು. ಹಾಗೂ ಕೊರೋನಾ ವೈರಸ್ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಲಿಂಗ ಸಮಾನತೆಯ ಬಗ್ಗೆ ಪ್ರಮಾಣ ವಚನವನ್ನು ಭೋದಿಸಲಾಯಿತು. ಪ್ರಭಾರ ಸಮುದಾಯ ಸಂಘಟನಾಧಿಕಾರಿ ಉಮಾವತಿ ಪ್ರಾಸ್ತವಿಕವಾಗಿ ಮಾತನಾಡಿದರು. ಜಯಲಕ್ಷ್ಮೀ ಸ್ವಾಗತಿಸಿದರು. ಶರ್ಮಿಳಾ ವಂದಿಸಿದರು.
ಬಂಟ್ವಾಳ ಪುರಸಭೆಯಲ್ಲಿ ಅಂತರಾಷ್ಟೀಯ ಮಹಿಳಾ ದಿನ ಆಚರಣೆ
