ಬಂಟ್ವಾಳ: ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಸೋಮವಾರ ಸಂಜೆ ನಾವೂರು ಶ್ರೀ ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭ ಪ್ರಮುಖರಾದ ಮುರಳೀಧರ ಭಟ್, ಅರ್ಚಕ ವೆಂಕಟದಾಸ ಭಟ್, ಸದಾನಂದ ಹಳೇಗೇಟು, ರಾಮಚಂದ್ರ ಭಟ್, ವಿಲಾಸಿನಿ ಮತ್ತಿತರರು ಉಪಸ್ಥಿತರಿದ್ದರು. ಕೆಲ ತಿಂಗಳ ಹಿಂದೆಯಷ್ಟೇ ನಾವೂರೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆದಿದ್ದು ಹರಿಕೃಷ್ಣ ಬಂಟ್ವಾಳ್ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಯಶಸ್ವಿ ಕಾರ್ಯಕ್ರಮವನ್ನು ಸಂಘಟಿಸಿದ್ದರು.