ಬಂಟ್ವಾಳ: ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕ ರಾಜೇಶ್ ನಾಕ್ ಶುಕ್ರವಾರ ಶಿಲಾನ್ಯಾಸ ನೆರವೇರಿಸಿದರು. ಬಳಿಕ ಪೆಟ್ರೋನೆಟ್ ಕಂಪೆನಿ ತನ್ನ ಸಿಎಸ್ಆರ್ ನಿಧಿಯಿಂದ ಕೊಡುಗೆಯಾಗಿ ನೀಡಿದ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಜಗತ್ತಿನ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ಕರೋನಾ ಮಹಾಮಾರಿಯನ್ನು ಸಮರ್ಥವಾಗಿ ಎದುರಿಸುತ್ತಿದೆ. ಇಂತಹ ಕಠಿಣ ಸಂದರ್ಭದಲ್ಲೂ ವಿದ್ಯಾರ್ಥಿಗಳ ಅನುಕೂಲ ಬೇಕಾದ ವ್ಯವಸ್ಥೆಗಳನ್ನು ಸರಕಾರ ಮಾಡುತ್ತಿದೆ. ಇಲ್ಲಿನ ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ದೃಷ್ಟಿಯಿಂದ ಇಂತಹ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ, ಪೆಟ್ರೊನೆಟ್ ಸಂಸ್ಥೆಯ ರಾಜನ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ರಜನಿ ಚಿಕ್ಕಯ ಮಠ, ಸದಸ್ಯರಾದ ಡಾ. ಶ್ಯಾಂ ಭಟ್, ಮಹಮ್ಮದ್ ಜಿ., ಸುರೇಶ್ ಸಾಲ್ಯಾನ್ ಬಳಕ, ಶ್ರೀನಿವಾಸ ಪೂಜಾರಿ ಮೆಲ್ಕಾರ್, ಸುಷ್ಮಾ ಚರಣ್, ಹರೀಶ್ಚಂದ್ರ ಚಿಕ್ಕಯ ಮಠ, ಸಚಿನ್, ಪದ್ಮನಾಭ ಬಳಕ, ಸುಜಾತ, ಯಶೋಧ, ದಿನೇಶ್ ಅಮ್ಟೂರು, ಭರತ್, ಪಿಡಬ್ಲ್ಯೂಡಿ ಎಂಜಿನಿಯರ್ ಅಮೃತ್ಕುಮಾರ್, ಗುತ್ತಿಗೆದಾರ ಜಗದೀಪ್ ಸುವರ್ಣ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಯೂಸೂಪ್ ವಿಟ್ಲ ಸ್ವಾಗತಿಸಿ, ವಂದಿಸಿದರು.