ಬಂಟ್ವಾಳ: ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಮಹೋತ್ಸವ ಶನಿವಾರ ನಡೆಯಿತು.
ಬ್ರಹ್ಮಶ್ರೀ ನಿಲೇಶ್ವರ ದಾಮೋದರ ತಂತ್ರಿಗಳ ಸಾರಥ್ಯದಲ್ಲಿ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ಚಂಡಿಕಾಹೋಮ, ದುರ್ಗಾ ನಮಸ್ಕಾರ ಪೂಜೆ, ರಂಗಪೂಜೆ ಹಾಗೂ ಮಹಾಪೂಜೆ ನಡೆಯಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸಂದರ್ಭ ಆಡಳಿತ ಮಂಡಳಿಯ ಅಧ್ಯಕ್ಷ ಸೀತಾರಾಮ ಕರೆಂಕಿ, ಕಾರ್ಯದರ್ಶಿ ರಾಮಚಂದ್ರ ಕರೆಂಕಿ, ಗೌರವಾಧ್ಯಕ್ಷ ರಾಮಚಂದ್ರ ಶೆಟ್ಟಿ, ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್, ಪುರುಷೋತ್ತಮ ಅಂಚನ್ ಮತ್ತಿತರರು ಹಾಜರಿದ್ದರು.
ರಾತ್ರಿ ಸಸಿಹಿತ್ಲು ಶ್ರೀ ಭಗವತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಇವರಿಂದ ಬೂಡುದ ಪಂಜುರ್ಲಿ ಯಕ್ಷಗಾನ ನಡೆಯಿತು. ಜಾತ್ರಾ ಮಹೋತ್ಸವದ ಅಂಗವಾಗಿ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ವತಿಯಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ದಾಂಜಲಿ ಅರ್ಪಿಸುವ ಸಲುವಾಗಿ ನಿರ್ಮಿಸಿದ್ದ ಅಮರ್ ಜವಾನ್ ಸ್ತಬ್ದ ಚಿತ್ರ ಗಮನ ಸೆಳೆಯಯಿತು
ಕರೆಂಕಿ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರಮಹೋತ್ಸವ
