ವಿಟ್ಲ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ವಿಟ್ಲಪಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂಚಾಯತ್ ಪೂರ್ವಭಾವಿ ಸಭೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಯವರ ನೇತೃತ್ವದಲ್ಲಿ ನಡೆಯಿತು.
ಇದೇ ಸಂದರ್ಭ ಮಾಜಿ ಸಚಿವರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಎಂ ಎಸ್ ಮೊಹಮ್ಮದ್, ಮಂಜುಳಾ ಮಾಧವ ಮಾವೆ,ಚಎಪಿಎಂಸಿ ಮಾಜಿ ಅಧ್ಯಕ್ಷ ಪದ್ಮನಾಭ ರೈ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ,ತಾಲೂಕು ಪಂಚಾಯತ್ ಸದಸ್ಯೆ ಶೋಭಾ ರೈ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ,ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲು,ವಲಯ ಸಂದೇಶ್ ಶೆಟ್ಟಿ ಬಿಕ್ನಾಜೆ, ಕೊಳ್ನಾಡು ಮಾಜಿ ಪಂಚಾಯತ್ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಮಧುಸೂದನ್ ಶೆಣೈ, ರಮಾನಾಥ್ ವಿಟ್ಲ, ರಿಯಾಜ್ ಹುಸೈನ್ ಮೊದಲಾದವರು ಉಪಸ್ಥಿತರಿದ್ದರು.