ಬಂಟ್ವಾಳ: ಅಮ್ಟಾಡಿ ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ನೂತನ ಲೊರೆಟ್ಟೊ ಶಾಖೆ ಲೊರೆಟ್ಟೊ ಪದವಿನ ಸಂತ ಅಂತೋನಿ ಕಾಂಪ್ಲೆಕ್ಸ್ನಲ್ಲಿ ಅ.೪, ಭಾನುವಾರ ಬೆಳಿಗ್ಗೆ ೧೦.೩೦ಕ್ಕೆ ಶುಭಾರಂಭಗೊಳ್ಳಲಿದೆ.
ಶಾಸಕ ರಾಜೇಶ್ ನಾಕ್ ಉದ್ಘಾಟಿಸುವರು, ಮಾಜಿ ಸಚಿವ ಬಿ.ರಮಾನಾಥ ರೈ ಭದ್ರತಾ ಕೋಶ ಉದ್ಘಾಟಿಸುವರು. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿದೇಶಕ ಟಿ.ಜಿ.ರಾಜರಾಮ್ ಭಟ್ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಸಹಕಾರ ಸಂಘಗಳ ಉಪನಿಭಂದಕ ಪ್ರವೀಣ್ ಬಿ.ನಾಯಕ್, ಸಹಾಯಕ ನಿಬಂಧಕ ಸುಧೀರ್ ಕುಮಾರ್, ಲೊರೆಟ್ಟೊ, ಲೊರೆಟ್ಟೊ ಚರ್ಚ್ ಧರ್ಮಗುರು ವಂ. ಫ್ರಾನ್ಸಿಸ್ ಕ್ರಾಸ್ತಾ, ಸಹಕಾರ ಅಭಿವೃದ್ಧಿ ಅಧಿಕಾರಿ ತ್ರಿವೇಣಿ ರಾವ್, ಪುರಸಭಾ ಸದಸ್ಯ ವಾಸು ಪೂಜಾರಿ ಲೊರೆಟ್ಟೊ, ಉದ್ಯಮಿ ಅಹಮ್ಮದ್ ಬಾವಾ ಭಾಗವಹಿಸಲಿರುವರು.