ಬಂಟ್ವಾಳ: ಕಂದಾಯ ಇಲಾಖೆ ಬಂಟ್ವಾಳ, ಜ.ಕೆ.ಎಸ್.ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ , ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಬಂಟ್ವಾಳ ತಾಲೂಕು ಕಂದಾಯ ಇಲಾಖಾ ಸಿಬ್ಬಂದಿಗಳಿಂದ ರಕ್ತದಾನ ಶಿಬಿರ ಮಿನಿವಿಧಾನ ಸೌಧದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಉದ್ಘಾಟಿಸಿದರು. ತಹಶೀಲ್ದಾರ್ ರಶ್ಮಿ ಎಸ್.ಆರ್. ಸ್ವತಃ ರಕ್ತದಾನ ಮಾಡಿದರು. ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಪ್ರಭು, ದೇರಳಕಟ್ಟೆ ಕೆ. ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯೆ ಡಾ. ಶ್ರೀಲಕ್ಷ್ಮಿ ವೇದಿಕೆಯಲ್ಲಿದ್ದರು. ಶಿರಸ್ತೇದಾರ್ ರಾಜೇಶ್ ನಾಯ್ಕ್, ರವಿಶಂಕರ್, ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಹಾಗೂ ಕಚೇರಿ ಸಿಬ್ಬಂದಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಸಹಾಯಕರು , ಸೇವಾಂಜಲಿಯ ವಿಕ್ರಂ ಫರಂಗಿಪೇಟೆ, ಪ್ರಶಾಂತ್, ಮೋಹನ್ ಸಹಕರಿಸಿದರು.ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ ವಂದಿಸಿದರು.