ಬಂಟ್ಬಾಳ: ಉತ್ತರ ಪ್ರದೇಶದಲ್ಲಿ ದಲಿತ ಯುವತಿ ಮನೀಷಾ ವಾಲ್ಮೀಕಿಯ ಅತ್ಯಾಚಾರ ಹಾಗೂ ದಾರುಣ ಹತ್ಯೆಯನ್ನು ಖಂಡಿಸಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ವತಿಯಿಂದ ಮೊಂಬತ್ತಿ ಜಾಥ ಬಿ.ಸಿ.ರೋಡಿನಲ್ಲಿ ಶುಕ್ರವಾರ ಸಂಜೆ ನಡೆಯಿತು.
ಕೈಕಂಬ ಪೊಳಲಿ ದ್ವಾರದಿಂದ ಆರಂಭಗೊಂಡ ಮೌನ ಮೆರವಣಿಗೆಯ ಜಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ಬಂದು ಬಿ.ಸಿ.ರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗ ಸಮಾಪನ ಗೊಂಡಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಪಡಾವೋ ಭೇಟಿ ಬಚಾವೋ ಎಂದು ಹೇಳುತ್ತಾರೆ. ಆದರೆ ಅದ್ಯಾವುದನ್ನು ಮಾಡುವ ಶಕ್ತಿ ಈ ಸರಕಾರಕ್ಕಿಲ್ಲ ಎಂದು ಆರೋಪಿಸಿದರು.ಪರಿಶಿಷ್ಟ ಜಾತಿಯ ಮಹಿಳೆಯರ ರಕ್ಷಣೆ ಮಾಡಲು ಸಾಧ್ಯವಾಗದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದ್ಯತ್ಯನಾಥ್ ರಾಜೀನಾಮೆ ನೀಡಿ ಅಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡುವಂತೆ ಒತ್ತಾಯಿಸಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್. ಮಹಮ್ಮದ್, ಮಂಜುಳಾ ಮಾಧವ ಮಾವೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ ಹಾಗೂ ಪಕ್ಷದ ಇತರ ಮುಖಂಡರಾದ ಸದಾಶಿವ ಬಂಗೇರ, ಪದ್ಮನಾಭ ರೈ, ಚಂದ್ರ ಶೇಖರ ಪೂಜಾರಿ, ಜಯಂತಿ ಪೂಜಾರಿ, ಮಲ್ಲಿಕಾ ಶೆಟ್ಟಿ, ಮಲ್ಲಿಕಾ ಪಕಳ, ಅಬ್ಬಸ್ ಅಲಿ, ಜನಾರ್ಧನ ಚೆಂಡ್ತಿಮಾರ್, ವಾಸು ಪೂಜಾರಿ, ಗಂಗಾಧರ ಪೂಜಾರಿ, ಮಹಮ್ಮದ್ ನಂದರಬೆಟ್ಟು, ಯೂಸುಫ್ ಕರಂದಾಡಿ, ಗಾಯತ್ರಿ ಆರ್ ಸಪಲ್ಯ, ಐಡಾ ಸುರೇಶ್, ರವೀಂದ್ರ ಸಪಲ್ಯ, ಮಧುಸೂದನ್ ಶೆಣೈ, ಲೋಲಾಕ್ಷ ಶೆಟ್ಟಿ, ಮಹಮ್ಮದ್ ಶರೀಫ್ ಮೊದಲಾದವರು ಉಪಸ್ಥಿತರಿದ್ದರು.