ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಕನ್ಯಾನ ವಲಯ ಕಾಂಗ್ರೆಸ್ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ ಎಸ್ ಮೊಹಮ್ಮದ್,ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ,ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಕನ್ಯಾನ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕನ್ಯಾನ, ಕೊಳ್ನಾಡು ಪಂಚಾಯತ್ ಅಧ್ಯಕ್ಷರಾದ ಸುಭಾಷ್ ಚಂದ್ರ ಶೆಟ್ಟಿ, ವಲಯ ಅಧ್ಯಕ್ಷ ಮಜೀದ್ ಕನ್ಯಾನ, ಕನ್ಯಾನ ಪಂಚಾಯತ್ ಮಾಜಿ ಅಧ್ಯಕ್ಷೆ ದೇವಕಿ, ಐಡಾ ಸುರೇಶ್ ಹಾಗೂ ಪಂಚಾಯತ್ ಸದಸ್ಯರು ಬೂತ್ ಅಧ್ಯಕ್ಷರು ಉಪಸ್ಥಿತರಿದ್ದರು.