ಬಂಟ್ವಾಳ: 2019ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗಬಾಗಿ ಬಂಟ್ವಾಳದ ಸರಕಾರಿ ಆಸ್ಪತ್ರೆಯಲ್ಲಿ ನಡೆದ ತಾಲೂಕು ಮಟ್ಟದ ಪಲ್ಸ್ ಪೋಲೀಯೋ ಕಾರ್ಯಕ್ರಮಕ್ಕೆ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರಾ ಚಾಲನೆ ನೀಡಿದರು. ಉಪಾಧ್ಯಕ್ಷ ಅಬ್ಬಾಸ್ ಆಲಿ, ಲಯನ್ಸ್ ಕ್ಲಬ್ ಸ್ತಾಪಕಾಧ್ಯಕ್ಷ ಡಾ|| ವಸಂತ ಬಾಳಿಗಾ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ಸದಾಶಿವ್ ಶ್ಯಾನುಭೋಗ್, ತಜ್ಞ ವೈದ್ಯ ಡಾ| ಸುರೇಂದ್ರನಾಥ್ ನಾಯ್ಕ್ ಉಪಸ್ಥಿತರಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ| ದೀಪಾಪ್ರಭು ಸ್ವಾಗತಿಸಿ, ವಂದಿಸಿದರು.
ಬಂಟ್ವಾಳದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ
