ಬಂಟ್ವಾಳ : ತಾಲೂಕು ಸರಕಾರಿ ಆಸ್ಪತ್ರೆಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ನೂತನ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಬೂಡ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ತಾ.ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ವೈದ್ಯಾಧಿಕಾರಿ ಡಾ.ಪುಷ್ಪಲತಾ, ಪ್ರಮುಖರಾದ ರಮಾನಾಥ ರಾಯಿ, ಸುಕೇಶ್ ಚೌಟ, ಪುರುಷೋತ್ತಮ ಶೆಟ್ಟಿ ಉಪಸ್ಥಿತರಿದ್ದರು.