ಬಂಟ್ವಾಳ : ಬಿ ಕಸ್ಬಾ ಗ್ರಾಮದ ನೇರಂಬೋಳು ಎಂಬಲ್ಲಿ ಮಳೆಯಿಂದ ಹಾನಿಗೊಳಗಾದ ಸುನಂದಾ ಪೂಜಾರಿ ಯವರ ಮನೆಗೆ ಮಾಜಿ ಸಚಿವ ಬಿ.ರಮಾನಾಥ ರೈ ಯವರು ಭೇಟಿ ನೀಡಿ ಪರಿಶೀಲಿಸಿದರು. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ಸೂಕ್ತ ಪರಿಹಾರ ಒದಗಿಸುವಂತೆ ತಿಳಿಸಿದರು.
ಈ ಸಂದರ್ಭ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ದಯಾನಂದ್ ಕುಲಾಲ್ ನೇರಂಬೋಳು ಉಪಸ್ಥಿತರಿದ್ದರು.